Belagavi

ದಿವಂಗತ ಸುರೇಶ ಅಂಗಡಿ ಅವರಿಗೆ ಗಣ್ಯರ ನಮನ

ಬೆಳಗಾವಿ, ಸೆ.25- ಬೆಳಗಾವಿಯ ಸದಾಶಿವ ನಗರ ಬಳಿಯ ಸಂಪಿಗೆ ನಗರದಲ್ಲಿರುವ ನಿವಾಸದಲ್ಲಿ ರೈಲ್ವೆ ಇಲಾಖೆಯ ರಾಜ್ಯ ಸಚಿವ ಹಾಗೂ ಸಂಸದರಾಗಿದ್ದ ದಿವಂಗತ ಸುರೇಶ ಅಂಗಡಿ ಅವರಿಗೆ ಗಣ್ಯರು ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಕೈಗಾರಿಕಾ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಗದೀಶ ಶೆಟ್ಟರ್ ದಂಪತಿ, ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತ ತ್ಯಾಗರಾಜನ್, ಡಿಸಿಪಿ ವಿಕ್ರಮ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಸೇರಿದಂತೆ ಅನೇಕ ಗಣ್ಯರು ಅಗಲಿದ ನಾಯಕ ಸುರೇಶ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶ್ರದ್ಧಾಂಜಲಿ ಸಲ್ಲಿಸಿದರು.

ದಿವಂಗತ ಸುರೇಶ ಅಂಗಡಿ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!