New Delhi

ಕೃಷಿ ಕ್ಷೇತ್ರದ ಮಸೂದೆಗಳ ವಿರುದ್ಧದ ಹೋರಾಟದಲ್ಲಿ ರೈತರನ್ನು ಬೆಂಬಲಿಸಿ : ರಾಹುಲ್ ಗಾಂಧಿ ಮನವಿ

ನವದೆಹಲಿ, ಸೆ 26- ಕೃಷಿ ಕ್ಷೇತ್ರದ ಮಸೂದೆಗಳ ವಿರುದ್ಧ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಮೇಲೆ ತನ್ನ ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರೈತರ ಶೋಷಣೆ ಮತ್ತು ದಬ್ಬಾಳಿಕೆಯ ವಿರುದ್ಧ ದನಿಯೆತ್ತುವಂತೆ ಜನರಿಗೆ ಕರೆ ನೀಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟಿಸಿ ರೈತರನ್ನು ಬೆಂಬಲಿಸುವಂತೆ ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಅಭಿಯಾನದ ಭಾಗವಾಗಿ ಸಾಮಾಜಿಕ ಮಾಧ್ಯಮದ ಪೋಸ್ಟ್ ನಲ್ಲಿ ಈ ಕುರಿತು ತಿಳಿಸಿರುವ ರಾಹುಲ್ ಗಾಂಧಿ, ” ಬನ್ನಿ, ನರೇಂದ್ರ ಮೋದಿ ಸರ್ಕಾರವು ರೈತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ಮತ್ತು ಶೋಷಣೆಯ ವಿರುದ್ಧ ಒಗ್ಗಟ್ಟಿನಿಂದ ಧ್ವನಿ ಎತ್ತೋಣ” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಸಂಸತ್ತು ಅಂಗೀಕರಿಸಿದ ಮೂರು ಕೃಷಿ ಕ್ಷೇತ್ರದ ಮಸೂದೆಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಅವುಗಳನ್ನು ‘ರೈತ ವಿರೋಧಿ’ ಮತ್ತು ಕಾರ್ಪೊರೇಟ್‌ಗಳಿಗೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಕಾಂಗ್ರೆಸ್ ದೂರಿದೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!