Mandya

ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟಿಸಿದ ಮಹಿಳೆಯರು

ಮಂಡ್ಯ, ಸೆ.28-  ಶ್ರೀರಂಗಪಟ್ಟಣದಲ್ಲಿ ಪ್ರತಿಭಟನಾ ನಿರತ ಮಹಿಳೆಯರು ರಸ್ತೆ ಮಧ್ಯೆ ಸುಡು ಬಿಸಿಲಿನಲೇ ತಲೆ ಮೇಲೆ ಕಲ್ಲು ಹೊತ್ತು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿದ್ದ ರಾಜ್ಯ ಬಂದ್ ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದ ರೈತರು, ವಿವಿಧ ಸಂಘಟನೆಗಳ ಸದಸ್ಯರು ಘೋಷಣೆ ಕೂಗಿದರು.
ಪ್ರತಿಭಟನಕಾರರೆಲ್ಲ ಒಟ್ಟು ಗೂಡಿ ರಸ್ತೆ ಮಧ್ಯೆ ವೃತ್ತಾಕಾರದಲ್ಲಿ ಕುಳಿತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದರು.
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಪ್ರತಿಭಟನಕಾರರು ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Back to top button
error: Content is protected !!