Bengaluru

ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊರೊನಾ ದೃಢ

ಬೆಂಗಳೂರು, ಸೆ.28- ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಆತ್ಮೀಯರೂ ಆದ ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಾಧುಸ್ವಾಮಿ ಅವರು ಶೀಘ್ರ ಗುಣಮುಖರಾಗಿ ತಮ್ಮ ಸಾರ್ವಜನಿಕ ಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ ಮಾಡಿ, ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!