Belagavi

ಸುರೇಶ ಅಂಗಡಿ ಪತ್ನಿಗೆ ಲೋಕಸಭೆ ಉಪಚುನಾವಣೆಯ ಟಿಕೆಟ್ ಕೊಡಲು ಆಗ್ರಹ

ಬೆಳಗಾವಿ, ೨೯- ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಇಂದು ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಸುರೇಶ ಅಂಗಡಿ ಅವರ ಸಂಬಂಧಿಕರು ಉಪಸ್ಥಿತರಿದ್ದರು.

ಅಗಲಿದ ಸುರೇಶ ಅಂಗಡಿ ಅವರ ಮಾವ ಲಿಂಗರಾಜ ಪಾಟೀಲ ಅವರು ಸುರೇಶ ಅಂಗಡಿ ಅವರ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಲೋಕಸಭೆ ಉಪಚುನಾವಣೆಯ ಬಿಜೆಪಿ ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿಕೊಂಡರು.

ಸುರೇಶ ಅಂಗಡಿ ಅವರ ಸೇವೆ ಅಪಾರವಾಗಿದ್ದು, ಅವರ ಅಗಲಿಕೆಯಿಂದ ತೆರವಾದ ಸ್ಥಾನಕ್ಕೆ ಅವರ ಕುಟುಂಬದವರಿಗೆ ಟಿಕೆಟ್ ಕೊಡಬೇಕು ಎನ್ನುವದು ಸುರೇಶ ಅಂಗಡಿ ಅವರ ಅಭಿಮಾನಿಗಳ ಒತ್ತಾಯವಾಗಿದೆ ಎಂದು ಪಾಟೀಲ ಮನವಿ ಮಾಡಿಕೊಂಡರು.

ಸುರೇಶ ಅಂಗಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ನಳೀನ ಕಟೀಲ್, ಪ್ರಜಾಪ್ರಭುತ್ವದ ಕೊಲೆ ಮಾಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲೇ ಇದೆ. ಈ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಕಾಂಗ್ರೆಸ್, ಅಧಿಕಾರ ಕಳೆದುಕೊಂಡಾಗ ಜನರನ್ನು ಪ್ರಚೋದಿಸಿ ಕಾಂಗ್ರೆಸ್ ಹೋರಾಟ ಮಾಡುತ್ತಾ ಬಂದಿದೆ. ಈಗ ಮುಗ್ಧ ರೈತರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಮೊದಲು ರೈತರ ಬೆಳೆಗೆ ದಲ್ಲಾಳಿಗಳು, ಕಮೀಶನ್ ಏಜಂಟರು ರೇಟ್ ಫಿಕ್ಸ್ ಮಾಡುತ್ತಿದ್ದರು. ಈಗ ರೈತರೇ ತಮ್ಮ ಬೆಳೆಗಳ ದರವನ್ನು ಫಿಕ್ಸ್ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ಭೂಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳು ರೈತರ ಪರವಾಗಿವೆ. ಈ ಕಾಯ್ದೆಗಳ ಕುರಿತು ರೈತರಿಗೆ ಮನವರಿಕೆ ಮಾಡುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಾರೆಂದು ಕಟೀಲ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!