Bengaluru

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ -ಸುರೇಶ್ ಕುಮಾರ್

ಬೆಂಗಳೂರು, ಸೆ.29- ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿರುವ ಅವರು, ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ. ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!