New Delhi

ಭಾರತದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್

ನವದೆಹಲಿ, ಸೆ 29- ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಭಾರತದಲ್ಲಿ ತನ್ನ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸುವುದಾಗಿ ಮಂಗಳವಾರ ಪ್ರಕಟಿಸಿದೆ.

ಕೇಂದ್ರ ಸರ್ಕಾರ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಮ್ನೆಸ್ಟಿ ಇಂಡಿಯಾ ಆರೋಪಿಸಿದೆ. 2020ರ ಸೆಪ್ಟಂಬರ್ 10ರಿಂದ ತನ್ನ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಇದರಿಂದ ತೀವ್ರ ನೋವು, ದುಃಖ ಹಾಗೂ ಭಾರವಾದ ಹೃದಯದಿಂದ ಈ ನಿರ್ಣಯ ಕೈಗೊಂಡಿದ್ದೇವೆ ಎಂದು ಹೇಳಿದೆ. ಆದರೆ ಈ ಆರೋಪಗಳ ಬಗ್ಗೆ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಬೇಕಿದೆ.

ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ತಾವು ಸಲ್ಲಿಸಿರುವ ವರದಿಗಳ ಹಿನ್ನೆಲೆಯಲ್ಲಿ ತಮ್ಮ ಸದಸ್ಯರು ಬೆದರಿಕೆ ಹಾಗೂ ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಗ್ರೂಪ್ ಹಿರಿಯ ಸಂಶೋಧನೆ, ನೀತಿ ನಿರ್ದೇಶಕ ರಜತ್ ಖೋಸ್ಲಾ ಹೇಳಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ತಾವು ಎತ್ತಿದ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಲು ನೀಡಲು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಮುಖವಾಗಿ ದೆಹಲಿ ಗಲಭೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಸಮಸ್ಯೆಗಳ ಬಗ್ಗೆ ಸರ್ಕಾರ ಮೌನ ವಹಿಸಿದೆ ಇಂತಹ ಸನ್ನಿವೇಶಗಳ ನಡುವೆ ಇನ್ನು ಮುಂದೆ ದೇಶದಲ್ಲಿ ಸೇವೆಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನಾವು 70 ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತೇವೆ. ಇದಕ್ಕೂ ಮೊದಲು 2016 ರಲ್ಲಿ ರಷ್ಯಾದಲ್ಲಿ ಮಾತ್ರ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು ಎಂದು ಖೋಸ್ಲಾ ಹೇಳಿದ್ದಾರೆ. ಆದರೂ ದೇಶದಲ್ಲಿ ಕಾನೂನು ಬದ್ದ ಪ್ರಕರಣಗಳ ವಿರುದ್ಧ ಹೋರಾಡಲಿದ್ದೇವೆ. ಪ್ರಪಂಚದಾದ್ಯಂತ ಜನರು ಇದನ್ನು ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!