New Delhi

ಬಾಬ್ರಿ ಮಸೀದಿ ದ್ವಂಸ ಅಂತಿಮ ತೀರ್ಪು; ಭದ್ರತೆ ಬಿಗಿಗೊಳಿಸಲು ಕೇಂದ್ರ ಆದೇಶ

ನವದೆಹಲಿ, ಸೆ 29- ಬಾಬರಿ ಮಸೀದಿ ದ್ವಂಸ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ನಾಳೆ ಲಕ್ನೋದಲ್ಲಿ ತನ್ನ ಅಂತಿಮ ತೀರ್ಪು ಪ್ರಕಟಿಸಲಿದೆ.

ಈ ಹಿನ್ನಲೆಯಲ್ಲಿ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ ಜಾರಿಗೊಳಿಸಿ, ಸೂಕ್ಷ್ಮ ಹಾಗೂ ಸಮಸ್ಯಾತ್ಮಕ ಪ್ರದೇಶಗಳಲ್ಲಿ ಭದ್ರತೆ ಬಿಗಿಗೊಳಿಸಲು ಆದೇಶಿಸಿದೆ.

ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲಯ ನಾಳೆ ಲಕ್ನೋದಲ್ಲಿ ತೀರ್ಪು ಪ್ರಕಟಿಸಲಿದೆ. ಈ ತೀರ್ಪುನಿಂದ ಶಾಂತಿ ಹಾಗೂ ಸುವ್ಯವಸ್ಥೆಗೆ ಸಮಸ್ಯೆ ಉಂಟಾಗುವ ಸಾಧ್ಯತೆಯ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯ ಗಳಿಗೆ ಸೂಚನೆ ನೀಡಿದೆ.

ರಾಮ ಜನ್ಮಭೂಮಿ – ಬಾಬರಿ ಮಸೀದಿ ಪ್ರಕರಣದ ಆರೋಪಿಗಳು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಬಹುದು ಕೆಲ ಮುಸ್ಲಿಂ ಸಮುದಾಯಗಳು ಭಾವಿಸುತ್ತಿವೆ. ಒಂದು ವೇಳೆ ತೀರ್ಪು ತಮ್ಮ ಪರ ಇಲ್ಲದಿದ್ದರೆ ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾಗುವ ಸಾದ್ಯತೆಯಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಸೂಕ್ಷ್ಮವಾಗಿರುವ ಜಿಲ್ಲೆಗಳಲ್ಲಿ ಭದ್ರತೆ ಹೆಚ್ಚಿಸಲು ಕೇಂದ್ರ ತಾಕೀತು ಮಾಡಿದೆ.

ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್ ಹಾಗೂ ಉಮಾ ಭಾರತಿ ಅವರು ನಾಳೆ ತನ್ನ ಮುಂದೆ ಹಾಜರಾಗುವಂತೆ ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿದೆ.

1992 ರ ಡಿಸೆಂಬರ್ 6 ರಂದು ಅಯೋಧ್ಯೆಯಲ್ಲಿ ಕರಸೇವಕರು 16 ನೇ ಶತಮಾನದ ಮಸೀದಿಯನ್ನು ಧ್ವಂಸಗೊಳಿಸಿದ್ದರು. ವಿಶೇಷ ಸಿಬಿಐ ನ್ಯಾಯಾಲಯ ಅಡ್ವಾಣಿ ಹಾಗೂ ಇತರರ ವಿರುದ್ಧ ಅಪರಾಧ ಸಂಚಿನಡಿ ಆರೋಪಗಳನ್ನು ದಾಖಲಿಸಿದೆ. ಅಡ್ವಾಣಿ ಹಾಗೂ ಇನ್ನಿತರರ ವಿರುದ್ಧದ ಅಪರಾಧ ಪಿತೂರಿ ಆರೋಪವನ್ನು 2001 ರಲ್ಲಿ ಸಿಬಿಐ ನ್ಯಾಯಾಲಯ ವಜಾಗೊಳಿಸಿತು. 2010 ರಲ್ಲಿ ಅಲಹಾಬಾದ್ ನ್ಯಾಯಾಲಯ ಈ ತೀರ್ಪನ್ನು ಎತ್ತಿಹಿಡಿದಿತ್ತು.

ಆದರೆ, ಅಲಹಾಬಾದ್ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಅಡ್ವಾಣಿ ಹಾಗೂ ಇತರರ ವಿರುದ್ಧ ದಾಖಲಾದ ಕ್ರಿಮಿನಲ್ ಆರೋಪಗಳನ್ನು ಮರುಸ್ಥಾಪಿಸಲು 2017 ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!