New Delhi

ಕರ್ನಾಟಕ ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ ಅ. 28 ರಂದು ಚುನಾವಣೆ

ನವದೆಹಲಿ, ಸೆ 29- ಕರ್ನಾಟಕದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮುಂದಿನ ತಿಂಗಳ 28 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಅ 1ರಂದು ಅಧಿಸೂಚನೆ ಹೊರಡಿಸಲಾಗುವುದು
ಆಗ್ನೇಯ ಪದವೀಧರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಆಯೋಗ ಚುನಾವಣೆ ನಡೆಸಲಿದೆ.

ಈ ನಾಲ್ಕು ಕ್ಷೇತ್ರಗಳಲ್ಲಿ ಆರ್.ಚೌಡರೆಡ್ಡಿ, ಎಸ್.ವಿ. ಸಂಕನೂರ, ಶರಣಪ್ಪ ಮಟ್ಟೂರ ಹಾಗೂ ಪುಟ್ಟಣ್ಣ ಸದಸ್ಯರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!