Belagavi

ಅಂಗಡಿ ಕುಟುಂಬಕ್ಕೆ ಜಾರಕಿಹೊಳಿ ಸಾಂತ್ವನ

ಬೆಳಗಾವಿ : ಕೊರೊನಾ ಸೋಂಕಿನಿಂದ ಮೃತಪಟ್ಟ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ತಮ್ಮ ಹಾಗು ಅಂಗಡಿಯವರ ಒಡನಾಟ ಸ್ಮರಿಸಿಕೊಂಡ ಸತೀಶ, ಅಂಗಡಿಯವರು ಸಜ್ಜನ ಹಾಗೂ ನಿಷ್ಠಾವಂತ ರಾಜಕಾರಣಿಯಾಗಿದ್ದರು. ಮೂರು ಬಾರಿ ಸಂಸದರಾಗಿ, ನಾಲ್ಕನೇ ಬಾರಿಗೆ ರೈಲ್ವೆ ಸಚಿವರಾಗಿ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಂತ ಅನೇಕ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸಿದರು. ಅದರಲ್ಲೂ ಬೆಳಗಾವಿ ಜಿಲ್ಲೆಗೆ ವಿಶೇಷ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು.

ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕು ಎಂಬ ಆಸೆಯನ್ನು ಹೊಂದಿದ್ದರು. ಆದರೆ ವಿಧಿ ಅವರನ್ನು ಕರೆದುಕೊಂಡಿದೆ. ಅವರ ಅಗಲಿಕೆ ರಾಜ್ಯಕ್ಕೆ ಮಾತ್ರವಲ್ಲ. ಇಡೀ ದೇಶಕ್ಕೆ ತುಂಬಲಾರದ ದುಃಖವನ್ನು ತಂದಿದೆ. ಆದರೆ ಅವರ ಮಾಡಿದ ಕೆಲಸ ಹಾಗೂ ಆದರ್ಶಗಳಿಂದ ಎಂದೆಂದಿಗೂ ಅಮರನಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಘಟಕದ ಕಾರ್ಯದರ್ಶಿ ಸುನೀಲ ಹನಮಣ್ಣನವರ, ಮುಖಂಡರಾದ ಜಯರಾಜ ಹಲಗೇಕರ ಸೇರಿದಂತೆ ಇತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!