Kalaburagi

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಕ್ಷಣಗಣನೆ : ಬಿಗಿಭದ್ರತೆ

ಕಲಬುರಗಿ, ಸೆ 30- ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಲಬುರಗಿ ಜಿಲ್ಲಾಡಳಿತ ಬುಧವಾರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ.

ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸದ್ಯಕ್ಕೆ ಎಲ್ಲಾ ರೀತಿಯ ಮೆರವಣಿಗೆ, ಆಚರಣೆ ಮತ್ತು ಸಾರ್ವಜನಿಕ ಕೂಟಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಆಯುಕ್ತ ಎನ್ ಸತೀಶ್ ಕುಮಾರ್ ತಿಳಿಸಿದ್ದಾರೆ.

ಪೊಲೀಸರು ವಿವಿಧ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಟ್ಟಿದ್ದಾರೆ ಪ್ರಚೋದನಾತ್ಮಕ ಹಾಗೂ ಕೋಮುಭಾವನೆ ಕದಡುವ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜನಸಾಮಾನ್ಯರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!