New Delhi

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿ 32 ಆರೋಪಿಗಳು ಖುಲಾಸೆ

ನವದೆಹಲಿ, ಸೆ, 30- ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ವಿವಾದಿತ ಇಪ್ಪತ್ತೇಳು ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಿದ್ದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ಸೇರಿದಂತೆ ಎಲ್ಲ 32ಆರೋಪಿಗಳನ್ನು ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಪ್ರಕರಣದ ಎಲ್ಲಾ 32 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಬಿಐ ವಿಶೇಷ ನ್ಯಾಯದೀಶ ಎಸ್.ಕೆ. ಯಾದವ್ ಅವರು ಈಗಾಗಲೇ ನಿರ್ದೇಶನ ನೀಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ದೇಶದ್ಯಾಂತ ಸೂಕ್ಮ ಹಾಗೂ ಅತೀ ಸೂಕ್ಮ ಪ್ರದೇಶ ಸೇರಿದಂತೆ ಎಲ್ಲೆಡೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!