Lucknow

ಕೋರ್ಟ್ ತೀರ್ಮಾನ ಸಂತಸ, ಸ್ವಾಗತಾರ್ಹ: ಅಡ್ವಾಣಿ

ನವದೆಹಲಿ, ಸೆ 30- ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಇಂದಿನ ಕೋರ್ಟ್ ತೀರ್ಮಾನ ಸ್ವಾಗತಾರ್ಹ, ಇದರಿಂದ ನಮಗೆಲ್ಲ ಸಂತಸ ವಾಗಿದೆ ಇದೊಂದು ಮಹತ್ವದ ತೀರ್ಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

1992 ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿ ಪ್ರಕರಣದ ಎಲ್ಲ ಆರೋಪಿಗಳು ನಿರ್ದೋಷಿಗಳು ಎಂದು ಸಾರಿದೆ.

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಪ್ರತಿಕ್ರಿಯಿಸಿ, ತೀರ್ಪಿನಿಂದ ನಮ್ಮೆಲ್ಲರಿಗೂ ಸಂತಸವಾಗಿದೆ ಎಂದರು. ಲಕ್ನೋದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು ಪಡಿಸಲು ಪ್ರಬಲ ಸಾಕ್ಷ್ಯಗಳು ಇಲ್ಲ ಹೀಗಾಗಿ ಎಲ್ಲಾ 32 ಆರೋಪಿಗಳು ನಿರ್ದೋಷಿಗಳು ಎಂದೂ ಆದೇಶದಲ್ಲಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!