Bengaluru

ಸುರೇಶ್ ಅಂಗಡಿ ಸಮಾಧಿ, ರುದ್ರಭೂಮಿಗೆ ತಡೆಗೋಡೆ ನಿರ್ಮಿಸಿ: ಮುಖ್ಯಮಂತ್ರಿಗೆ ಮನವಿ

ಬೆಂಗಳೂರು, ಸೆ 30- ಇತ್ತೀಚೆಗೆ ನಿಧನರಾದ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ನಡೆಸಿದ ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ನಿರ್ಮಿಸುವಂತೆ ಸುರೇಶ್ ಅಂಗಡಿ ಅವರ ಅಳಿಯಂದಿರಾದ ಸಂಕಲ್ಪ ಶೆಟ್ಟರ್ ಹಾಗೂ ಡಾ ರಾಹುಲ್ ಪಾಟೀಲ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕರೋನಾ ಸೋಂಕಿಗೆ ಒಳಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಈ ಸ್ಥಳದಲ್ಲಿ ದಿವಂಗತರ ಘನತೆಗೆ ತಕ್ಕುದಾದ ಸಮಾಧಿ ನಿರ್ಮಿಸುವ ಮೂಲಕ ಗೌರವ ಸಲ್ಲಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ದ್ವಾರಕದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ಹಾಗೂ ಸಮಾಧಿಯನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿದರು.

ಈ ಸಂಧರ್ಭದಲ್ಲಿ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!