New Delhi

ಸಿಬಿಐ ಕೋರ್ಟ್ ತೀರ್ಪನ್ನು ಪ್ರಶ್ನಿಸಲಿದ್ದೇವೆ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಫಿರಂಗಿ ಮಹಾಲಿ

ನವದೆಹಲಿ, ಸೆ 30- ಬಾಬ್ರಿ ಮಸೀದಿ ದ್ವಂಸಗೊಳಿಸಿರುವುದು ಪೂರ್ವ ನಿಯೋಜಿತ ಕೃತ್ಯವಲ್ಲ. ಇದಕ್ಕೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದೂ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಸ್ಥೆಗಳು ಮೇಲ್ಮನವಿ ಸಲ್ಲಿಸಲು ಆಲೋಚನೆ ನಡೆಸುತ್ತಿವೆ.

ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಬೇಡವೇ..? ಎಂಬ ಅಂಶದ ಬಗ್ಗೆ ಮುಸ್ಲಿಂ ಸಮುದಾಯವನ್ನು ಪ್ರತಿನಿಧಿಸುವ ಸಂಘ ಸಂಸ್ಥೆಗಳು ನಿರ್ಣಯ ಕೈಗೊಳ್ಳಲಿವೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಹಿರಿಯ ಸದಸ್ಯ ಮೌಲಾನಾ ಖಾಲಿದ್ ರಷೀದ್ ಫಿರಂಗಿ ಮಹಾಲಿ ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾದವ್ ಬುಧವಾರ ತೀರ್ಪು ಪ್ರಕಟಿಸಿ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಎಲ್.ಕೆ.ಅಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ ಹಾಗೂ ಉಮಾ ಭಾರತಿ ಸೇರಿದಂತೆ 32 ಮಂದಿ ನಿರ್ದೋಷಿಗಳೆಂದು ಘೋಷಿಸಿದ್ದರು.

ಆದರೆ, ಆರೋಪಿಗಳು ನಿರ್ದೋಷಿಗಳೆಂದು ನ್ಯಾಯಾಲಯ ಅವರನ್ನು ಖಲಾಸೆಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಲು ಮಹಾಲಿ ನಿರಾಕರಿಸಿದರು. ತೀರ್ಪಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. 1992 ರ ಡಿಸೆಂಬರ್ 6 ರಂದು ಅಯೋಧ್ಯೆಯ ಬಾಬರಿ ಮಸೀದಿ ಹೇಗೆ ಕೆಡವಲಾಯಿತು ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದರು.

ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸುವ ವಿಷಯದಲ್ಲಿ ಮುಸ್ಲಿಂ ಸಂಘ ಸಂಸ್ಥೆಗಳು ಸಭೆ ನಡೆಸಿ ನಿರ್ಣಯಕ್ಕೆ ಬರಲಿದ್ದೇವೆ. ಮೇಲ್ಮನವಿ ಸಲ್ಲಿಕೆಯಿಂದ ಪ್ರಯೋಜನವಾಗಲಿದೆಯೇ, ಇಲ್ಲವೇ ಎಂಬುದನ್ನು ಕಾಲವೇ ನಿರ್ಣಯಿಸಲಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ದೇಶದಲ್ಲಿರುವ ಮುಸ್ಲಿಮರಿಗೆ ನ್ಯಾಯಾಲಯಗಳ ಬಗ್ಗೆ ಅಪಾರ ಗೌರವಹೊಂದಿದ್ದಾರೆ. ಮುಂದೆಯೂ ಕೂಡ ಆದೇ ಗೌರವ ಮುಂದವರಿಸಲಿದ್ದಾರೆ ಎಂದು ಮಹಾಲಿ ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!