Bengaluru

ಅ.15 ರವರೆಗೆ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುವ ಅಗತ್ಯವಿಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು, ಸೆ 30 – ಕೋವಿಡ್ ಸೋಂಕು ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 15 ರ ವರೆಗೆ ರಾಜ್ಯದಲ್ಲಿ ಶಾಲಾ, ಕಾಲೇಜುಗಳನ್ನು ಆರಂಭಿಸದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ತಮ್ಮ ಸಂದೇಹಗಳ ಪರಿಹಾರಕ್ಕಾಗಿ ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಬಹುದು ಎಂದು ಅನುಮತಿ ನೀಡಲಾಗಿತ್ತು. ಇದೀಗ ಮುಂದಿನ ತಿಂಗಳ ಮಧ್ಯ ಭಾಗದವರೆಗೆ ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶೈಕ್ಷಣಿಕ ಚಟುವಟಿಕೆ ಆರಂಭಿಸುವ ಕುರಿತು ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸೋಂಕು ಸಂಖ್ಯೆ ತಗ್ಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಕ್ಷೇಮವಲ್ಲ ಎಂದು ಅವರು ಹೇಳಿದ್ದಾರೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಯಂತೆ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಉಳಿದೆಡೆ ಸೆಪ್ಟೆಂಬರ್ 21 ರ ನಂತರ 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಸಂದೇಹ ನಿವಾರಣೆಗಾಗಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರನ್ನು ಭೇಟಿ ಮಾಡಬಹುದು ಎಂದು ಹೇಳಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!