Bengaluru

ತರಾತುರಿಯಲ್ಲಿ ಶಾಲಾ- ಕಾಲೇಜು ಆರಂಭಿಸುದಿಲ್ಲ -ಶಿಕ್ಷಣ ಸಚಿವ

ಬೆಂಗಳೂರು, ಅ.1 – ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತವಿಲ್ಲ. ತರಾತುರಿಯಲ್ಲಿ ಶಾಲೆಗಳನ್ನು ಪುನಾರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪುನರುಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ಶಾಲೆಗಳ ಪ್ರಾರಂಭದ ಬಗ್ಗೆ ರಾಜ್ಯಗಳು ‌ನಿರ್ಧಾರ ಕೈಗೊಳ್ಳಲು ಸೂಚಿಸಿದೆ. ನಾವು‌ ಯಾವುದೇ ಆತುರದ ತೀರ್ಮಾನ ಕೈಗೊಳ್ಳುವುದಿಲ್ಲ. ನಾನು ಪ್ರತಿನಿತ್ಯ ಪೋಷಕರು, ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸುತ್ತಿದ್ದೇನೆ. ಮಕ್ಕಳ ರಕ್ಷಣೆ ನಮ್ಮ ಮೊದಲ ಆದ್ಯತೆ. ಹೀಗಾಗಿ ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ತರಾತುರಿಯಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅನ್ ಲಾಕ್ 0.5 ಮಾರ್ಗಸೂಚಿಯನ್ನು ನಿನ್ನೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಶಾಲಾ-ಕಾಲೇಜು ಆರಂಭಿಸುವ ಜವಾಬ್ದಾರಿಯನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆ ಆರಂಭವಾಗಲಿದೆಯೇ ಎಂಬ ಚರ್ಚೆ ನಡೆಯುತ್ತಿರುವುದರಿಂದ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಎಲ್ಲಾ ಶಾಸಕರಿಂದಲೂ ಸಚಿವರು ಶಾಲೆ ಆರಂಭದ ಬಗ್ಗೆ ಅಭಿಪ್ರಾಯ ಕೇಳಿದ್ದರು.ಬಹುತೇಕ ಶಾಸಕರು ಸದ್ಯಕ್ಕೆ ಶಾಲೆ ಆರಂಭಿಸದಿರುವುದು ಒಳ್ಳೆಯದು ಎಂಬ ಅಭಿಪ್ರಾಯ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!