Hathras

ಉತ್ತರ ಪ್ರದೇಶ ಪೋಲೀಸರಿಂದ ತಳ್ಳಾಟ; ಉರುಳಿ ಬಿದ್ದ ರಾಹುಲ್ ಗಾಂಧಿ, ಬಂಧನ

 

ಲಕ್ನೋ, ಅ 1 ಉತ್ತರ ಪ್ರದೇಶ ಹತ್ರಾಸ್ ನಲ್ಲಿ ನೆಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಘಟನೆಯ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿದಿವೆ. ಸಾಮೂಹಿಕ ಅತ್ಯಾಚಾರಕ್ಕೀಡಾದ ಬಾಲಕಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಮಂಗಳವಾರ ಮುಂಜಾನೆ ಸಾವನ್ನಪ್ಪಿರುವುದು ವಿಪಕ್ಷಗಳು, ಮಹಿಳಾ, ನಾಗರೀಕ ಹಕ್ಕುಗಳ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಆದಿತ್ಯನಾಥ ಸರ್ಕಾರ ಮಹಿಳೆಯರ ರಕ್ಷಣೆ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ ಎಂಬ ಟೀಕೆಗೆ ಒಳಗಾಗಿದೆ. ಈ ಘಟನೆಯನ್ನು ಖಂಡಿಸಿ ಉತ್ತರ ಪ್ರದೇಶ ಕಾಂಗ್ರೆಸ್, ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದು ಕಡೆ ಬಾಧಿತೆ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಸದ ರಾಹುಲ್ ಗಾಂಧಿ ಹತ್ರಾಸ್ ಗೆ ತೆರಳಲು ಮುಂದಾಗಿದ್ದರು.

ಈ ಹಿನ್ನಲೆಯಲ್ಲಿ ಸ್ಥಳೀಯ ಪೊಲೀಸರು ಜಿಲ್ಲಾದ್ಯಂತ 144 ಕಲಂ ನಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಬಾಧಿತೆಯ ಗ್ರಾಮದ ಸುತ್ತ ಭಾರಿ ಪ್ರಮಾಣದ ಬ್ಯಾರಿಕೇಡ್ ಅಳವಡಿಸಿ ಅನ್ಯರು ಒಳ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದ್ದರು. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಆಗಮಿಸಿದ ಹಿನ್ನಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಹತ್ರಾಸ್ ಗೆ ಹೊರಟು ನಿಂತಿದ್ದರು. ಬಾಧಿತ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಅವರಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ಪಕ್ಷದ ಕಾರ್ಯಕರ್ತರು ಧರಣಿಗೆ ಮುಂದಾಗಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಸಹ ಹತ್ರಾಸ್ ಗೆ ತೆರಳದಂತೆ ರಸ್ತೆಯಲ್ಲೆ ತಡೆದು ನಿಲ್ಲಿಸಿದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಈ ಹಂತದಲ್ಲಿ ಪೊಲೀಸರು ಹಾಗೂ ರಾಹುಲ್ ಗಾಂಧಿ ನಡುವೆ ಮಾತುಕತೆ ಚಕಮಕಿ, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ಕೆಳಗೆ ಉರುಳಿಬಿದ್ದ ಘಟನೆಯೂ ನಡೆಯಿತು.

ನಂತರ ಕಾಂಗ್ರೆಸ್ ನಾಯಕರನ್ನು ಬಂಧಿಸಿ ಅತಿಥಿ ಗೃಹದಲ್ಲಿರಿಸಿದ್ದಾರೆ ಎಂದು ವರದಿಯಾಗಿದೆ. ಹೊಸ ಬೆಳವಣಿಗಳ ಬಗ್ಗೆ ಬಿ ಎಸ್ ಪಿ ಮುಖ್ಯಸ್ಥೆ ಮಾಯಾವತಿ, ಸಮಾಜವಾದಿ ಪಕ್ಷದ ನಾಯಕಿ ಅಖಿಲೇಷ್ ಯಾದವ್ ತೀವ್ರ ಆಕ್ರೋಶಪಡಿಸಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಕನಿಷ್ಟ ಮಟ್ಟದ ರಕ್ಷಣೆಯೂ ಇಲ್ಲವಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದ ದಲಿತ ಯುವತಿ(19)ಯ ಪಾರ್ಥಿವ ಶರೀರವನ್ನು ಮಧ್ಯರಾತ್ರಿ ಕಳೆದ ನಂತರ ಪೊಲೀಸರು ಆತುರಾತುರವಾಗಿ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಈಗಾಗಲೇ ಅತ್ಯಾಚಾರ ಘಟನೆಯ ಬಗ್ಗೆ ದೇಶಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿವೆ.. ಹೊಸ ಬೆಳವಣಿಗೆಗಳು ರಾಜಕೀಯ ಪಕ್ಷಗಳು, ಹಕ್ಕುಗಳ ಸಂಘಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತಿವೆ. ದಲಿತ ಸಮುದಾಯಕ್ಕೆ ಸೇರಿದ ಕಾರಣ ಬಾಧಿತೆಯ ಸಾವಿನಲ್ಲೂ ಕ್ರೂರವಾಗಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಮಧ್ಯರಾತ್ರಿ ರಹಸ್ಯವಾಗಿ ಅಂತ್ಯಕ್ರಿಯೆ ನಡೆಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!