Bengaluru

ಹೊರಗುತ್ತಿಗೆ ನೌಕರರ ಪ್ರತಿಭಟನೆ ಮತ್ತಷ್ಟು ತೀವ್ರ

ಬೆಂಗಳೂರು, ಅ 1- ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರ ಪ್ರತಿಭಟನೆ ಶುಕ್ರವಾರದಿಂದ ಮತ್ತಷ್ಟು ತೀವ್ರಗೊಳ್ಳಲಿದೆ.
ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕಚೇರಿಗಳ ಮುಂದೆ ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದ ಗಮನಸೆಳೆಲಿದ್ದಾರೆ.

ಕಳೆದ 7 ದಿನಗಳಿಂದ ರಾಜ್ಯದ ಆರೋಗ್ಯ, ವೈದ್ಯಕೀಯ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ, ಹೊರಗುತ್ತಿಗೆ ನೌಕರರು ಮುಷ್ಕರ ನಡೆಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರೂ ಸರ್ಕಾರ ನಮ್ಮ ಬೇಡಿಕೆಗಳ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರ ಸಂಘದ ಪದಾಧಿಕಾರಿಗಳು ಅಸಮಾಧಾನ ಹೊರ ಹಾಕಿದ್ದಾರೆ.

ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ನಾಳೆಯಿಂದ ಮತ್ತಷ್ಟು ತೀವ್ರಗೊಳಿಸಲಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕಚೇರಿಗಳ ಮುಂದೆ ನಾಳೆಯಿಂದ ಗುತ್ತಿಗೆ, ಹೊರಗುತ್ತಿಗೆ ನೌಕರರು ಒಂದು ಗಂಟೆ ಮುಷ್ಕರ ನಡೆಸಲಿದ್ದಾರೆ ಎಂದು ಸಂಘದ ಮುಖಂಡರು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!