Bengaluru

ರಾಹುಲ್, ಪ್ರಿಯಾಂಕಾ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿದ ಜೆಡಿಎಸ್

 

ಬೆಂಗಳೂರು,ಅ.1- ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಲು ಕಾಲ್ನಡಿಗೆಯಲ್ಲಿ ಹೊರಟಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದೌರ್ಜನ್ಯವನ್ನು ಜೆಡಿಎಸ್ ಖಂಡಿಸಿದ್ದು, ಇಂತಹ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಶಾಂತಿಯುತ ಪ್ರತಿಭಟನೆಯನ್ನು ನಡೆಸುತ್ತಿದ್ದ ನಾಯಕರ ಕೊರಳಪಟ್ಟಿಗೆ ಪೊಲೀಸರು ಅಲ್ಲಿನ ಅಧಿಕಾರ ಹಿಡಿದವರ ನಿರ್ದೇಶನವಿಲ್ಲದೇ ಕೈ ಹಾಕಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಂತಹ ದೇಶದಲ್ಲಿ ರಾಜಕೀಯ ವಿರೋಧಿಗಳನ್ನು ಹಣಿಯಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿರುವುದು ಹಾಗೂ ದಲಿತ ಬಾಲಕಿಯ ಪೋಷಕರನ್ನು ಹೊರಗಿಟ್ಟು ಆಕೆಯ ಶವವನ್ನು ಕತ್ತಲಲ್ಲಿ ಸುಟ್ಟಿರುವುದು ಖಂಡನೀಯ‌.
ಅಹಿಂಸಾ ಪ್ರತಿಪಾದಕ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನದ ಮುನ್ನ ಇಂದು ಉತ್ತರ ಪ್ರದೇಶ ಪೊಲೀಸರು ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಅಮಾನವೀಯ ವರ್ತನೆ ತೋರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಭಟನಾ ಅಸ್ತ್ರವನ್ನು ಹಾಡುಹಗಲೇ ದಹಿಸುವ ಯತ್ನ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!