Bengaluru

ರೈತ ವಿರೋಧಿ ಮಸೂದೆ ವಿರೋಧಿಸಿ ಶುಕ್ರವಾರ ಉಪವಾಸ ಸತ್ಯಾಗ್ರಹ

 

ಬೆಂಗಳೂರು, ಅ.1- ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ನಾಳೆ ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನಾ ಉಪವಾಸ ಸತ್ಯಾಗ್ರಹ” ನಡೆಯಲಿದ್ದು, ಬೆಂಗಳೂರಿನಲ್ಲಿಯೂ ಸತ್ಯಾಗ್ರಹ ನಡೆಯಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ, ಕಾರ್ಮಿಕ ವಿರೋಧಿ, ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಯ ತಿದ್ದುಪಡಿಗಳು ಹಾಗೂ `ಕೃಷಿ ಉತ್ಪನ್ನ ವಾಣಿಜ್ಯ ಮತ್ತು ಮಾರಾಟ (ಉತ್ತೇಜನ ಮತ್ತು ಬೆಂಬಲ) ಕಾಯ್ದೆ – 2020′,”ಬೆಲೆ ಭರವಸೆ (ಸಶಕ್ತಿಕರಣ ಹಾಗೂ ಸುರಕ್ಷೆ) ಮತ್ತು ಕೃಷಿ ಸೇವೆಗಳ ಕಾಯ್ದೆ-2020, “ಅಗತ್ಯ ವಸ್ತುಗಳ ಕಾಯ್ದೆ-2020” “ಕಾರ್ಮಿಕ ವಿರೋಧಿ ಕಾಯ್ದೆ” “ವಿದ್ಯುತ್ ಕಾಯ್ದೆ-2020″ಗಳ ಜಾರಿಯನ್ನು ವಿರೋಧಿಸಿ ಇವುಗಳನ್ನು ಕೂಡಲೇ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ನಾಳೆ ಶುಕ್ರವಾರ ʻಗಾಂಧಿ ಜಂಯಂತಿʼ ಅಂಗವಾಗಿ “ರಾಷ್ಟ್ರವ್ಯಾಪಿ ಪ್ರತಿಭಟನಾ ಉಪವಾಸ ಸತ್ಯಾಗ್ರಹ” ನಡೆಸಲಾಗುವುದು ಎಂದು ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಗ್ಗೆ 11.30ಕ್ಕೆ ಮೌರ್ಯ ವೃತ್ತದ ಗಾಂಧ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ತಿಳಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!