Bengaluru

ರಾಹುಲ್ ಗಾಂಧಿ, ಪ್ರಿಯಾಂಕಾ ಬಂಧನಕ್ಕೆ ಸಿದ್ದರಾಮಯ್ಯ ಕಿಡಿ

 

ಬೆಂಗಳೂರು, ಅ. 1- ಉತ್ತರಪ್ರದೇಶದ ಪೊಲೀಸರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದನ್ನು ವಿಧಾನಸಭೆ ವಿರೊದ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಪಕ್ಷದ ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉತ್ತರಪ್ರದೇಶದ ಪೊಲೀಸ್ ರಾಜ್ಯದಲ್ಲಿ‌ ಸಂಸದ ರಾಹುಲ್ ಗಾಂಧಿ ಮತ್ತು ನಮ್ಮ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರೇ ಸುರಕ್ಷಿತರಲ್ಲ ಎಂದ‌ ಮೇಲೆ ಅಲ್ಲಿನ‌ ದಲಿತರು, ಮಹಿಳೆಯರು,

ರೈತರು, ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಪಕ್ಷದ ನಾಯಕರನ್ನು ಬಂಧಿಸುವ ಮುಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ತಿಳಿಸಿದ್ದಾರೆ
ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ ಎಂದು ದೂರಿದ್ದಾರೆ.

ಮುಖ್ಯಮಂತ್ರಿ ಆದಿತ್ಯನಾಥ್ ಸರ್ಕಾರದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ಆ ಕುಟುಂಬದ ಭೇಟಿಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ದೂರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!