Bengaluru

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮುಗಿದ ಅಧ್ಯಾಯ : ಕುಮಾರಸ್ವಾಮಿ

ಬೆಂಗಳೂರು,ಅ 01- ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇಲ್ಲವೆಂದಿರುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಜೆಡಿಎಸ್ ನಾಯಕ,ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿ ದ್ದಾರೆ.ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲವೆನ್ನುವ ಮೂಲಕ ಮೈತ್ರಿ ಮುಗಿದ ಅಧ್ಯಾಯವೆಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ.ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿ ಎಸ್ನಿಂದ ಮುಂದಿಟ್ಟಿರುವು ದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ.ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ,ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ,ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿ ಸುತ್ತಿರುವ ಅದರ ವರ್ತನೆಯು,ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ.ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎನ್ನುವ ಮೂಲಕ ಕಾಂಗ್ರೆಸ್ ನಾಯಕರ ವರ್ತನೆ ಹಾಗೂ ರೀತಿ ನೀತಿಗಳು ಹೊಂದಾಣಿಕೆಯಾಗು ವುದಿಲ್ಲವೆಂದು ತಿಳಿಸಿದ್ದಾರೆ.

ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ.ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ.ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ.ಹಾಗೇ,ಜೆಡಿಎಸ್,ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯ ಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!