Yadgir

ಕೊರೋನಾಗೆ ನರ್ಸ್ ಬಲಿ

 

ಯಾದಗಿರಿ : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ವ್ಯಾಪಿಸುತ್ತಿದ್ದು ಆತಂಕ ಸೃಷ್ಟಿಸುತ್ತಿದೆ. ಇದೀಗ ಕೊರೊನಾ ಸೋಂಕಿತರ ಸೇವೆಮಾಡಿದ್ದ ಸರಕಾರಿ ನರ್ಸ್ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.

ಯಾದಗಿರಿ ತಾಲೂಕಿನ ಕೌಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 12 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ 34 ವರ್ಷದ ಗೀತಾ ಎಂಬುವವರು ಸೋಂಕಿತರಾಗಿದ್ದರು, ಚಿಕಿತ್ಸೆಪಡೆಯುತ್ತಿದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಸೆ.19 ರಂದು ಮೊದಲ ಬಾರಿ ಗೀತಾ ಅವರಿಗೆ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಗುಣವಾಗಿದ್ದರು. ಆದರೆ ಅಸ್ವಸ್ಥರಾಗಿದ್ದ ಅವರು ಸೆ. 29 ರಂದು ಮತೊಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಾಗ ಸೋಂಕಿರುವದು ದೃಢ ಪಟ್ಟಿತ್ತು. ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಗೀತಾ ಸಾವಿಗೆ ಆರೋಗ್ಯ ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!