Chikkamagaluru

ವರಿಷ್ಠರೇ ಅಲಿಖಿತ ನಿಯಮಗಳನ್ನು ಬದಲಿಸುತ್ತಾರೆ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೊಲ್ಲ

ಚಿಕ್ಕಮಗಳೂರು,ಅ 02- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಸಿ.ಟಿ ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು.ಆದರೆ ಇದೀಗ ಸಚಿವರು ತಮ್ಮ ವರಸೆ ಬದಲಿಸಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲವೆಂಬ ಸಂದೇಶ ತಿಳಿಸಿದ್ದಾರೆ.

ರಾಜೀನಾಮೆ ಕುರಿತು ಮಾತನಾಡಿರುವ ಸಿ.ಟಿ ರವಿ,ನಮ್ಮಲ್ಲಿ ಒಬ್ಬರಿಗೆ ಒಂದು ಸ್ಥಾನ ಎಂಬ ಅಲಿಖಿತ ನಿಯಮವಿದೆ. ಇದೇ ರೀತಿ 75 ವರ್ಷ ದಾಟಿದವರು ಅಧಿಕಾರ,ರಾಜಕೀಯದಿಂದ ನಿವೃತ್ತಿ ಹೊಂದಬೇಕು ಎಂಬ ನಿಯಮ ವೂ ಇದೆ. ಆದರೆ ಕೆಲವೊಮ್ಮೆ ವರಿಷ್ಠರೇ ಅಲಿಖಿತ ನಿಯಮಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಸ್ಥಾನ ಎಂಬ ನಿಯಮವಿರುವುದರಿಂದ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ. ರಾಜೀನಾ ಮೆ ಪತ್ರ ರೆಡಿಮಾಡಿ ಇಟ್ಟುಕೊಂಡಿದ್ದೇನೆ. ಪಕ್ಷ ಸೂಚಿಸಿದ ಕೂಡಲೇ ರಾಜೀನಾಮೆ ನೀಡುತ್ತೇನೆ ಎಂದಿದ್ದರು. ಆದರೆ ಇದೀಗ ಸಿ.ಟಿ ರವಿ ಹೇಳಿಕೆ ನೋಡಿದರೆ ಸಚಿವ ಸ್ಥಾನ ಬಿಡಲು ಮನಸ್ಸಿದ್ದಂತೆ ಇಲ್ಲ ಎನ್ನಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!