Hathras

ಹತ್ರಾಸ್ ಪ್ರಕರಣದ ವಿರುದ್ಧ ಪ್ರತಿಭಟನೆ: ಸಂಜಯ ಸಿಂಗ್ ಪತ್ನಿ ಸೇರಿ 30 ಮಂದಿ ಪೊಲೀಸ್ ವಶಕ್ಕೆ

ಪ್ರಯಾಗರಾಜ್, ಅ 02- ಹತ್ರಾಸ್ ಘಟನೆ ಖಂಡಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ಪತ್ನಿ ಸೇರಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) 30 ಕ್ಕೂ ಹೆಚ್ಚು ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹತ್ರಾಸ್ ಘಟನೆಯಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಆಪ್ ಕಾರ್ಯಕರ್ತರು ಉಪವಾಸ ಮುಷ್ಕರ ನಡೆಸುವಾಗ ವಶಕ್ಕೆತೆಗೆದುಕೊಂಡ ಪೊಲೀಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಕೆಂಡ ಕಾರಿದ್ದಾರೆ.

ನಿಯಮಗಳ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲೇ ಬಂಧನಕ್ಕೊಳಗಾದವರಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ಪತ್ನಿ ಅನಿತಾ ಸಿಂಗ್ ಕೂಡ ಸೇರಿದ್ದಾರೆ.

ಪೊಲೀಸರು ಪ್ರತಿಭಟನಾಕಾರರನ್ನು ಥಳಿಸಿದ್ದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಯಾದವ್ ಆರೋಪಿಸಿದ್ದಾರೆ.

ಮಹಿಳೆಯರ ಮೇಲೆ ಅತ್ಯಾಚಾರ ಎಸಗುವ ಘಟನೆಗಳು ನಿರಂತರವಾಗಿ ಹೆಚ್ಚುತ್ತಿವೆ. ಇಂತಹ ಘಟನೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ‘ಬೇಟಿ ಬಚಾವೊ, ಬೇಟಿ ಪಾಧಾವೊ’ ಎಂಬ ಘೋಷಣೆಯನ್ನು ನೀಡಿದ ಸರ್ಕಾರ ಮಹಿಳೆಯರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!