Bengaluru

ಉತ್ತರಪ್ರದೇಶಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಡಿ.ಎಸ್.ಎಸ್. ಧರಣಿ

ಬೆಂಗಳೂರು, ಅ 2- ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕ್ರೂರವಾಗಿ ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಶಿಕ್ಷಿಸಿ, ಆದಿತ್ಯನಾಥ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಡಿ.ಎಸ್.ಎಸ್. ರಾಜ್ಯಾಧ್ಯಕ್ಷ ಡಾ ಸಿ ಎಸ್‌ ರಘು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರಕರಣದಲ್ಲಿ ತಾರತಮ್ಯ, ನಿರ್ಲಕ್ಷತೆ ತೋರಿಸಿದ ಅಧಿಕಾರಿ ಹಾಗೂ ರಾಜಕಾರಣಿಗಳ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ದಲಿತ ಯುವತಿ ಮೇಲೆ ಅತ್ಯಾಚಾರ ಮಾಡಿದ ನಂತರ ಗಂಭೀರವಾಗಿ ಹಲ್ಲೆ ಮಾಡಲಾಗಿದೆ. ದೆಹಲಿಯ ಆಸ್ಪತ್ರೆಯಲ್ಲಿ 14 ದಿನಗಳ ಕಾಲ ಜೀವನ್ಮರಣದ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ. ನಂತರ ಆಕೆಯ ಮೃತದೇಹವನ್ನು ಕುಟುಂಬಕ್ಕೆ ಒಪ್ಪಿಸದೆ ಆಕೆಯ ಅಂತಿಮ ದರ್ಶನಕ್ಕೂ ಸಹ ಸರಕಾರ ಅವಕಾಶ ನೀಡದೇ ರಾತ್ರೋರಾತ್ರಿ ಪೊಲೀಸ್‌ ಬಂದೋಬಸ್ತಿನಲ್ಲಿ ಮೃತದೇಹವನ್ನು ಸುಟ್ಟು ಹಾಕಿರುವುದು ಅತ್ಯಂಗ ಬರ್ಬರವಾಗಿದೆ ಎಂದು ಆರೋಪಿಸಿದರು.

ಘೋರ ಕೃತ್ಯಕ್ಕೆ ಕಾರಣರಾದ ಆರೋಪಿಗಳನ್ನು ರಕ್ಷಿಸುವ ಹೀನ ಕೃತ್ಯದಲ್ಲಿ ಬಿಜೆಪಿ ಸರ್ಕಾರ ನಿರತವಾಗಿದೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾದ ಕೇಂದ್ರ ಹಾಗೂ ರಾಜ್ಯ ಸರಕಾರದ ಸರ್ವಾಧಿಕಾರಿ ದೋರಣೆ ತೋರುತ್ತಿದೆ. ಉತ್ತರಪ್ರದೇಶದ ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!