Koppal

ರಾಜ್ಯದಲ್ಲೇ ಹೊಸ ಭಾಷ್ಯ ಬರೆದ ಗಂಗಾವತಿ ಆಸ್ಪತ್ರೆ…!!

ಕೊಪ್ಪಳ, ಅ 3- ರಾಜ್ಯದ ಕರೋನ ಚಿಕಿತ್ಸೆಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲಾಗಿದೆ.

ಈ ಮೂಲಕ ರಾಜ್ಯಮಟ್ಟದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಅದರಲ್ಲೂ ತಾಲೂಕು ಮಟ್ಟದ ಆಸ್ಪತ್ರೆಯಲ್ಲಿ ಯಶಸ್ವಿ ಪ್ಲಾಸ್ಮಾ ಚಿಕಿತ್ಸೆ ಮಾಡಿದ ಕೀರ್ತಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಆಸ್ಪತ್ರೆ ಭಾಜನವಾಗಿದೆ.

ಕೇವಲ ಪ್ರತಿಷ್ಠಿತ ಖಾಸಗಿ ಹಾಗೂ ದೊಡ್ಡ ಮಲ್ಟಿ ಸ್ಪೆಷಲ್ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿದ್ದ ಪ್ಲಾಸ್ಮಾ ಚಿಕಿತ್ಸೆಯ ಪ್ರಯೋಗ ಇದೇ ಮೊದಲ ಬಾರಿಗೆ ಗಂಗಾವತಿ ಪಟ್ಟಣದ ತಾಲೂಕು ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ನಡೆದಿದ್ದು, ಪ್ಲಾಸ್ಮಾ ಚಿಕಿತ್ಸೆಯಲ್ಲಿ ಗಂಗಾವತಿ ತಾಲೂಕು ಆಸ್ಪತ್ರೆ ಹೊಸ ಭಾಷ್ಯ ಬರೆದಿದೆ .

ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರಿಗೆ ಸೋಂಕು ದೃಢಪಟ್ಟು ಕಳೆದ ಎಂಟು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧರಿರನ್ನು ನಂತರ ಪ್ಲಾಸ್ಮಾ ತೆರಫಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಕರೋನದಿಂದ ಸಂಪೂರ್ಣ ಗುಣಮುಖರಾದ ನಾಲ್ವರು ವ್ಯಕ್ತಿಗಳಿಂದ ಪ್ಲಾಸ್ಮಾ ಸಂಗ್ರಹಿಸಲಾಗಿತ್ತು. ಹುಬ್ಬಳ್ಳಿಯಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಮಾವನ್ನು ಪ್ರತ್ಯೇಕಿಸಿ ತಂದು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಪ್ಲಾಸ್ಮಾ ನೀಡಲಾಗಿದೆ. ಸದ್ಯ ವ್ಯಕ್ತಿಯ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ, ಅವರು ಕೆಲವೇ ದಿನದಲ್ಲಿ ಪೂರ್ಣ ಗುಣಮುಖರಾಗುವ ವಿಶ್ವಾಸವನ್ನು ಗಂಗಾವತಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಈಶ್ವರ ಸವಡಿ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!