Bengaluru

ಸಿ.ಟಿ.ರವಿ ರಾಜೀನಾಮೆ; ವರಿಷ್ಠರ ತೀರ್ಮಾನಕ್ಕಾಗಿ ಕಾಯುತ್ತಿರುವ ಮುಖ್ಯಮಂತ್ರಿ

ಬೆಂಗಳೂರು,ಅ.4- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ರಾಜ್ಯದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವ ಜನ ಸಬಲೀಕರಣ, ಕ್ರೀಡಾ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅದನ್ನು ಮುಖ್ಯಮಂತ್ರಿ ಇನ್ನೂ ಅಂಗೀಕರಿಸಿಲ್ಲ. ಬಿಜೆಪಿ ವರಿಷ್ಠರು ನೀಡುವ ಸೂಚನೆ ಆಧರಿಸಿ ಮುಖ್ಯಮಂತ್ರಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಅ.5ರಂದು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ದೆಹಲಿಗೆ ತೆರಳುವುದಾಗಿ ಸಿ.ಟಿ.ರವಿ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜೀನಾಮೆ ಅಂಗೀಕರಿಸಬೇಕೇ ಬೇಡವೇ ಎಂಬುದನ್ನು ತೀರ್ಮಾನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!