Uncategorized

ಅಕ್ಟೋಬರ್ 5ರಿಂದ ಇಸ್ಕಾನ್ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತ

ಬೆಂಗಳೂರು,ಅ.3- ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ನಗರದ ಇಸ್ಕಾನ್ ದೇವಾಲಯವು ಅಕ್ಟೋಬರ್ 5ರಂದು ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ.

ಕೊರೊನಾ ಸೋಂಕಿನಿಂದಾಗಿ ಸತತ ಆರು ತಿಂಗಳ ಬಳಿಕ ದೇವಾಲಯ ಬಾಗಿಲು ತೆರೆಯಲಿದೆ. ಕಳೆದ ಮಾರ್ಚ್‌ ತಿಂಗಳಲ್ಲಿ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ಇನ್ನೆರೆಡು ದಿನಗಳಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ಮತ್ತು ಸಂಜೆ 4 ರಿಂದ 8ರವರೆಗೆ ತೆರೆದಿರಲಿದೆ. ವಾರಾಂತ್ಯದಲ್ಲಿ ಬೆಳಗ್ಗೆ 9.30ರಿಂದ ರಾತ್ರಿ 8ಗಂಟೆಯವರೆಗೂ ತೆರೆದಿರಲಿದೆ.

ದೇವಾಲಯಕ್ಕೆ ಬರುವವರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಹತ್ತು ವರ್ಷಕ್ಕಿಂತ ಕಡಿಮೆ ಇರುವವರು ಹಾಗೂ 65ಕ್ಕಿಂತ ಹೆಚ್ಚು ವರ್ಷದವರು ದೇವಸ್ಥಾನಕ್ಕೆ ಬರುವಂತಿಲ್ಲ. ಭಜನೆ, ಭಗವದ್ಗೀತೆ ಇನ್ನಿತರೆ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.

ಕೇಂದ್ರ ಸರ್ಕಾರ ಅನ್‍ ಲಾಕ್ 5 ಜಾರಿ ಮಾಡಿದ ಬೆನ್ನಲ್ಲೇ ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಬಹುತೇಕ ಪ್ರಸಿದ್ಧ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಅಂತೆಯೇ ಇದೀಗ ನಗರದ ಪ್ರಸಿದ್ಧ ಇಸ್ಕಾನ್ ದೇವಾಲಯವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ. ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ.

Leave a Reply

Your email address will not be published. Required fields are marked *

Back to top button
error: Content is protected !!