Chikkaballapur

ನಂದಿಗಿರಿಧಾಮಕ್ಕೆ ಪ್ರವಾಸಿಗರ ಲಗ್ಗೆ , ಮೈಲಿಗಟ್ಟಲೆ ಟ್ರಾಫಿಕ್ ಜಾಮ್

ಚಿಕ್ಕಬಳ್ಳಾಪುರ, ಅಕ್ಟೋಬರ್ 4- ವಾರಾಂತ್ಯ ಹಾಗೂ ಸತತ ರಜೆ ದಿನಗಳ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಪ್ರಸಿದ್ದ, ನಂದಿಗಿರಿಧಾಮಕ್ಕೆ ಭಾನುವಾರ ಸಾವಿರಾರು ಪ್ರವಾಸಿಗರು ಲಗ್ಗೆಯಿಟ್ಟಿದ್ದು , ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ.

ಕೊರೊನಾ ಸೊಂಕಿನ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ಕೆಲವು ತಿಂಗಳ ಕಾಳ ನಿರ್ಬಂಧಿಸಲಾಗಿತ್ತು.

ನಂದಿಗಿರಿಧಾಮದ ಸೂರ್ಯೋದಯ ಸೌಂದರ್ಯ ಸವಿಯಲು ಮುಂಜಾನೆ 4-5 ಗಂಟೆಯಿಂದಲೇ ನಂದಿಗಿರಿಧಾಮದತ್ತ ಪ್ರವಾಸಿಗರು ಆಗಮಿಸಿದ್ದಾರೆ.

ಆದರೆ ಬೆಳಗ್ಗೆ 8 ಗಂಟೆ ನಂತರ ನಂದಿಗಿರಿಧಾಮಕ್ಕೆ ಪ್ರವಾಸಿಗರ ವಾಹನಗಳ ಪ್ರವೇಶಕ್ಕೆ ಅನುಮತಿ ಇದೆ. ಹೀಗಾಗಿ ಚೆಕ್ ಪೋಸ್ಟ್ ನಲ್ಲಿ ವಾಹನಗಳಿಗೆ ತಡೆಯೊಡ್ಡಲಾಗಿತ್ತು. ಹೀಗಾಗಿ ಚೆಕ್ ಪೋಸ್ಟ್ ಬಳಿ 4 ರಿಂದ 5 ಕಿಲೋಮೀಟರ್ ದೂರ ರಸ್ತೆಯುದ್ದಕ್ಕೂ ವಾಹನಗಳು ನಿಂತಿದ್ದವು .

 

Leave a Reply

Your email address will not be published. Required fields are marked *

Back to top button
error: Content is protected !!