New Delhi

ಕೃಷಿ ಕಾಯ್ದೆಗಳ ಅಂಗೀಕರಿಸಲು ಮೋದಿ ಸರ್ಕಾರಕ್ಕೆ ಏಕೆ ಇಷ್ಟೊಂದು ಅವಸರ ?; ರಾಹುಲ್ ಪ್ರಶ್ನೆ

ಅಮೃತ್ ಸರ್, ಅ 4- ಕೇಂದ್ರ ಸರ್ಕಾರ ಆತುರಾತುರವಾಗಿ ಕೃಷಿ ವಲಯದ ಸುಧಾರಣೆಯ ವಿಧೇಯಕಗಳನ್ನು ರೂಪಿಸುವ ಆಗತ್ಯವೇನಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಶ್ನಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ದೇಶಾದ್ಯಂತ ಇನ್ನಿಲ್ಲದಂತೆ ವ್ಯಾಪಿಸುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಕೃಷಿ ವಿಧೇಯಕಗಳನ್ನು ಸಂಸತ್ತಿನಲ್ಲಿ ಮಂಡಿಸಿ ಚರ್ಚೆ ನಡೆಸದೆ ಅವಸರದಲ್ಲಿ ಅಂಗೀಕಾರ ಪಡೆದುಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಭಾನುವಾರ ರಾಜ್ಯ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ‘ಖೇತಿ ಬಚಾವ್ ಅಭಿಯಾನ’ದಲ್ಲಿ ದಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆ ಹರಿಸಿದರು

ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಹಿತರಕ್ಷಣೆಗಾಗಿ ಕೃಷಿ ವಿಧೇಯಕಗಳನ್ನು ತಂದಿದ್ದೇವೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಅದು ನಿಜವಾಗಿದ್ದರೆ ವಿಧೇಯಕಗಳ ಬಗ್ಗೆ ಲೋಕಸಭೆ, ರಾಜ್ಯಸಭೆಯಲ್ಲಿ ಏಕೆ ಚರ್ಚಿಸಲಿಲ್ಲ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.

ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೆ ವಿಧೇಯಕಗಳಿಗೆ ಅವಸರದಲ್ಲಿ ಅನುಮೋದನೆ ಪಡೆದುಕೊಳ್ಳುವ ಅಗತ್ಯವೇನಿತ್ತು? ಎಂದು ರಾಹುಲ್ ಕೇಳಿದರು. ಸರ್ಕಾರ ತಂದಿರುವ ಕೃಷಿ ಕಾಯ್ದೆಗಳು ವ್ಯವಸಾಯಗಾರರ ಹಿತಾಸಕ್ತಿ ಕಾಪಾಡುವ ಉದ್ದೇಶ ಹೊಂದಿದ್ದರೆ, ಅವುಗಳ ವಿರುದ್ಧ ರೈತರು ಏಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಈ ಮೂರು ಕೃಷು ವಿಧೇಯಕಗಳನ್ನು ಕಸದ ಬುಟ್ಟಿಗೆ ಎಸೆಯಲಿದೆ ಎಂದು ರಾಹುಲ್ ಹೇಳಿದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!