Hyderabad

ಐಪಿಸಿ, ಸಿ ಆರ್ ಪಿ ಸಿ ಕಾಯ್ದೆಗಳ ಬದಲಾವಣೆಗೆ ಕೇಂದ್ರ ಚಿಂತನೆ

ಹೈದರಾಬಾದ್, ಅ 4- ನಗರ ಪ್ರದೇಶಗಲ್ಲಿ ಹೆಚ್ಚುತ್ತಿರುವ ಅಪರಾಧಗಳನ್ನು ತಡೆಯಲು ಅತ್ಯುತ್ತಮ ಪೊಲೀಸ್ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸಚಿವ ಕಿಶನ ರೆಡ್ಡಿ ಭಾನುವಾರ ಹೇಳಿದ್ದಾರೆ.

ಹೈದರಾಬಾದ್‌ನ ಅಂಬರ್ಪೆಟ್ ಡಿಸಿಪಿ ಕಚೇರಿಯಲ್ಲಿ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಈ ಹಿಂದೆ ನ್ಯಾಯಾಲಯಗಳ ಮುಂದೆ ಅಪರಾಧಗಳನ್ನು ಸಾಬೀತುಪಡಿಸುವುದು ಪೊಲೀಸರಿಗೆ ತುಂಬಾ ಕಷ್ಟವಾಗುತ್ತಿತ್ತು ಪ್ರಸ್ತುತ ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ಹೆಚ್ಚಿನ ಅನುಕೂಲವಾಗುತ್ತಿದೆ ಎಂದರು.

ಸೇಫ್ ಸಿಟಿ ಯೋಜನೆಯಡಿ ದೇಶದ ಎಂಟು ಪ್ರಮುಖ ನಗರಗಳಾದ ಹೈದರಾಬಾದ್,ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಮುಂಬೈ ನಗರ ಪೊಲೀಸ್ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಕೇಂದ್ರ ಸರ್ಕಾರ ಗಮನ ಹರಿಸಿದೆ ಎಂದರು.

ವಿಧಿ ವಿಜ್ಞಾನ ವಿಭಾಗದಲ್ಲಿ ಖಾಲಿ ಉರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಳೆಯ ಬ್ರಿಟೀಷರ ಕಾಲದ ಐ ಪಿಸಿ, ಸಿ ಆರ್ ಪಿ ಸಿ ಕಾಯ್ದೆಗಳ ಬದಲಾವಣೆಗೆ ಪ್ರಧಾನಿ ಮೋದಿ ಆಲೋಚನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಕುರಿತು ಉನ್ನತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗುವುದು ಎಂದರು.
ಯುಎನ್ಐ ಕೆವಿಆರ್ 17.06

Leave a Reply

Your email address will not be published. Required fields are marked *

Back to top button
error: Content is protected !!