Bellary

ಬಳ್ಳಾರಿ ನಗರವನ್ನು ಸ್ಮಾರ್ಟ್‌ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಿ: ಸಂಸದ ದೇವೇಂದ್ರಪ್ಪ ಮನವಿ

ಬಳ್ಳಾರಿ, ಅ 4- ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರ ಬಳ್ಳಾರಿ ನಗರವನ್ನು ಕೇಂದ್ರ ಸರಕಾರದ ಸ್ಮಾರ್ಟ್‌ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಿ ಎಂದು ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು, ಬಳ್ಳಾರಿ ಹಾಗೂ ಕಲಬುರ್ಗಿ ಮಾತ್ರ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ನಗರಪಾಲಿಕೆಗಳಾಗಿವೆ. ಅತ್ಯಂತ ಹಳೆಯ ನಗರವಾಗಿರುವ ಬಳ್ಳಾರಿ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ. ರಾಜ್ಯದ ಎರಡು ಜಿಲ್ಲೆಗಳು ಹಾಗೂ ಆಂದ್ರ ಪ್ರದೇಶ ರಾಜ್ಯದ ಮೂರು ಜಿಲ್ಲೆಗಳ ಮಧ್ಯೆ ಪ್ರಮುಖ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಬಳ್ಳಾರಿಯನ್ನು ಸೇರ್ಪಡೆಗೊಳಿಸಿಕೊಳ್ಳುವುದರಿಂದ ನಗರದ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತವೆ. ಅಲ್ಲದೆ ಈ ಭಾಗದಲ್ಲಿ ಆರ್ಥಿಕತೆಗೆ ಪುಷ್ಠಿ ನೀಡುತ್ತವೆ. ಈ ಪತ್ರದ ಜೊತೆಯಲ್ಲಿ ಬಳ್ಳಾರಿ ನಗರದ ಬಗ್ಗೆ ಸಣ್ಣ ಪುಸ್ತಿಕೆಯನ್ನು ನೀಡಿದ್ದು, ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಈ ಭಾಗದ ಭೌಗೋಳಿಕ ಹಾಗೂ ಜನಸಂಪನ್ಮೂಲದ ಅಭಿವೃದ್ದಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!