Bengaluru

ಸಿಬಿಐ ದಾಳಿ : ಕಾಂಗ್ರೆಸ್ ಕಾರ್ಯಕರ್ತರಿಂದ ಡಿಕೆಶಿ ನಿವಾಸ ಹಾಗೂ ಇತರೆಡೆ ಪ್ರತಿಭಟನೆ

ಬೆಂಗಳೂರು ,ಅ 5- ಡಿ.ಕೆ. ಸಹೋದರರ ನಿವಾಸದ ಮೇಲೆ ಸಿಬಿಐ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆ ಶಿವಕುಮಾ ರ್ ಬೆಂಬಲಿಗರು ಸದಾಶಿವ ನಗರದ ಮನೆ ಬಳಿ ಹಾಗೂ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಸಿಬಿಐ ದಾಳಿ ಮಾಹಿತಿ ಪಡೆದ ಕೆಲ ಕಾರ್ಯಕರ್ತರು ನೇರವಾಗಿ ಸದಾಶಿವ ನಗರದ ನಿವಾಸದ ಬಳಿ ಬಂದಿದ್ದಾರೆ.ಇನ್ನೂ ಕೆಲವು ಕಾರ್ಯಕರ್ತರು ಡಿ.ಕೆ.ಶಿವ ಕುಮಾರ್ ಮತ್ತು ಡಿ.ಕೆ.ಸುರೇಸ್ ಭೇಟಿಗಾಗಿ ನಿವಾಸಕ್ಕೆ ಆಗಮಿಸಿದರು.ಈ ವೇಳೆ ದಾಳಿ ಮಾಹಿತಿ ಪಡೆದು ಸ್ಥಳದಲ್ಲಿಯೇ ಇರುವ ಬೆಂಬಲಿಗರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ನಿವಾಸದ ಬಳಿಕ ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಸುರೇಸ್ ನಿವಾಸದ ಬಳಿ ಜಮಾಯಿಸಿದ 100ಕ್ಕೂ ಹೆಚ್ಚು ಕಾರ್ಯಕರ್ತರು ಏಕಾಏಕಿ ಯುವ ಮೋರ್ಚಾದ ಬಾವುಟಗಳನ್ನು ಹಿಡಿದ ಸರ್ಕಾರದ ವಿರು ದ್ಧ ಘೋಷಣೆ ಕೂಗುತ್ತಾ ಪೊಲೀಸರ ತಳ್ಳಿಕೊಂಡು ಡಿ.ಕೆ.ಶಿವಕುಮಾರ್ ನಿವಾಸದವರೆಗೂ ಆಗಮಿಸಿದ್ದಾರೆ.ಇದರಿಂದಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಮತ್ತೊಂದೆಡೆ ಕಾಂಗ್ರೆಸ್ ಭವನದಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ,ಕೆಲವು ಮುಖಂಡರು ಸೇರಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನು ದೊಡ್ಡ ಆಲಹಳ್ಳಿಯಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಸಿಬಿಐ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.ಹೀಗಾಗಿ ಎಲ್ಲೆಡೆಯೂ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ದೂರಿನ ಮೇಲೆ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ಮಾತ್ರವಲ್ಲದೆ ಅವರಿಗೆ ಸೇರಿರುವ ಒಟ್ಟು 14 ಕಡೆ ಸಿಬಿಐ ದಾಳಿ ನಡೆಸಲಾಗಿದೆ. ಅಲ್ಲದೆ ಕರ್ನಾಟಕದ 9 ಕಡೆ, ದೆಹಲಿಯ 4 ಕಡೆ ಹಾಗೂ ಮುಂಬೈನ 1 ಕಡೆ ಇಂದು ಸಿಬಿಐ ದಾಳಿ ನಡೆಸಲಾಗಿದೆ.

ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಪಾವಗಡ ಸೋಲಾರ್ ಪಾರ್ಕ ಸೇರಿದಂತೆ ಬೇರೆ ಬೇರೆ ಯೋಜನೆಗಳಲ್ಲಿ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿಕೊಂಡು,ಬಹುಕೋಟಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಲೆಹಾಕಿದ್ದ ಐಟಿ ಮತ್ತು ಇಡಿ ಇಲಾಖೆ ಆ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಿತ್ತು.ಇದೇ ಕಾರಣಕ್ಕೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!