Belagavi

ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯಿಂದ ಸಿಬಿಐ ದಾಳಿ- ಸತೀಶ ಜಾರಕಿಹೊಳಿ

ಬೆಳಗಾವಿ, ೫- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಮನೆಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತ, ಉದ್ದೇಶಪೂರ್ವಕ, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪಕ್ಷ ಸಿದ್ಧವಾಗುತ್ತಿರುವ ಪರಿ ಕಂಡು ಬೆದರಿರುವ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ತೊಂದರೆಪಡಿಸಲು ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆಯೆಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಜಾರಕಿಹೊಳಿ
ದಾಳಿ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಆದಾಯ ತೆರಿಗೆ, ಸಿಬಿಐ ಮುಂತಾದ ಸಂಸ್ಥೆಗಳನ್ನು ತನ್ನ ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿದೆ, ಈ ಬಗ್ಗೆ ಕಾಂಗ್ರೆಸ್ ಸೇರಿದಂತೆ ಎಲ್ಲ ವಿರೋಧಿ ಪಕ್ಷಗಳು ಧ್ವನಿಯೆತ್ತಿವೆ. ಉಪ ಚುನಾವಣೆಗೆ ಪಕ್ಷ ಸಿದ್ಧಗೊಳುತ್ತಿರುವ ಪರಿಕಂಡು ಬೆದರಿರುವ ರಾಜ್ಯ ಬಿಜೆಪಿ ಕೇಂದ್ರದಲ್ಲಿರು ತನ್ನ ಸರಕಾರದ ಮೂಲಕ ಡಿಸ್ಟರ್ಬ್ ಮಾಡುವ ಉದ್ದೇಶದಿಂದಲೇ ದಾಳಿ ನಡೆಸಿದೆ. ಆದರೆ ಪಕ್ಷ ದೊಡ್ಡದು ಅದನ್ನು ಹೆದರಿಸಲು, ಬೆದರಿಸಲು ಸಾಧ್ಯವಿಲ್ಲ, ಎಂದು ಅವರು ಹೇಳಿದ್ದಾರೆ.

ಶಿವಕುಮಾರ ಇಂತಹ ಸಮಸ್ಯೆಗಳನ್ನು ಎದುರಿಸಲು ಸಮರ್ಥರು, ಇದನ್ನೂ ಯಶಸ್ವಿಯಾಗಿ ಫೇಸ್ ಮಾಡುತ್ತಾರೆ, ಅವರ ಅಧ್ಯಕ್ಷತೆಯಲ್ಲಿ ಪಕ್ಷ ಬಲಗೊಳ್ಳುತ್ತಿದ್ದು ಸರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!