Kolhapur

ಹತ್ರಾಸ್ ಪ್ರಕರಣ : ಮೋದಿ, ಯೋಗಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಕೊಲ್ಹಾಪುರ, ಅ 05- ಹತ್ರಾಸ್ ಯುವತಿಯ ಹತ್ಯೆ ಘಟನೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ರಾಜ್ಯವ್ಯಾಪಿ ಸತ್ಯಾಗ್ರಹ ಹಮ್ಮಿಕೊಂಡಿರುವ ಭಾಗವಾಗಿ ಕಾರ್ಯಕರ್ತರು ಸೋಮವಾರ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಮತ್ತೊಂದು ನಿರ್ಭಯಾ ಪ್ರಕರಣದಂತಿರುವ ಆಘಾತಕಾರಿ ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆಯಿಂದ ನಿರ್ಗಮಿಸಿಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಡಿಎಸ್ ಪಿ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪಾಟೀಲ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಕ್ತ ರೀತಿಯಲ್ಲಿ ವರ್ತಿಸುತ್ತಿಲ್ಲ. ಪ್ರಧಾನಿ ಹಾಗೂ ಮುಖ್ಯಮಂತ್ರಿ ಈ ಘಟನೆಗೆ ಪರೋಕ್ಷವಾಗಿ ಕಾರಣರಾಗಿರುವುದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!