Entertainment

ವಸಿಷ್ಠ ಸಿಂಹ ಅಭಿನಯದ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಗೆ ಪ್ರಶಂಸೆಯ ಮಹಾಪೂರ

ಬೆಂಗಳೂರು, ಅ 06- ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ.

ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ , ವಸಿಷ್ಠ ಸಿಂಹ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ.

ಈ ಹಿಂದೆ ಕಿಚ್ಚ ಸುದೀಪ ಅವರು ಚಿತ್ರದ ಟೀಸರ್ ಬಿಡುಗಡೆ ಮಾಡಿ ಪ್ರಶಂಸೆ ಮಾತುಗಳಾಡಿದ್ದರು.

ಸುಮಂತ್ ಕ್ರಾಂತಿ ನಿರ್ಮಾಣ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

ಗುರುಕಿರಣ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚೇತನ ಕುಮಾರ, ಕವಿರಾಜ, ಸಂತೋಷ ನಾಯಕ ಬರೆದಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಷ್ ಖೇರ್, ಪಂಚಮ ಜೀವ ಹಾಡಿದ್ದಾರೆ.

ಎಲ್ ಎಂ ಸೂರಿ ಛಾಯಾಗ್ರಹಣ, ಸೌಂದರ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ‌ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.

ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ ಶೆಟ್ಟಿ, ಸುಚೇಂದ್ರ ಪ್ರಸಾದ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!