New Delhi

ಶಾಸಕರ ಮೇಲಿನ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಮ ಕೋರ್ಟ್ ಸೂಚನೆ

ನವದೆಹಲಿ, ಅ 6- ದೇಶಾದ್ಯಂತ ಹಾಲಿ ಮತ್ತು ಮಾಜಿ ಶಾಸಕರ ಮೇಲಿನ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

‘ಇದು ಬಹಳ ಗಂಭೀರವಾದ ವಿಷಯವಾಗಿದೆ. ಬಾಕಿ ಉಳಿದಿರುವ ಈ ವಿಷಯಗಳ ಕುರಿತು ಕೇಂದ್ರ ಸರ್ಕಾರ ತಕ್ಷಣವೇ ಕ್ರಮ ತೆಗೆದುಕೊಂಡು, ಈ ಕುರಿತಂತೆ ನ್ಯಾಯಾಲಯಕ್ಕೆ ತಿಳಿಸಬೇಕು. ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ನಾವು ಸಿದ್ಧರಿದ್ದೇವೆ.’ ಎಂದು ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ.

ದೇಶಾದ್ಯಂತದ ಶಾಸಕರು ಮತ್ತು ಸಂಸದರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ವಸ್ತುಸ್ಥಿತಿಯ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಂದ ವಿವರ ತಿಳಿಯುವಂತಾಗಬೇಕು ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.

ದೇಶಾದ್ಯಂತ ಹಾಲಿ ಮತ್ತು ಮಾಜಿ ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದಾಗಿ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.

ಈ ಸನ್ನಿವೇಶದಲ್ಲಿ ಸಮನ್ಸ್ ಇತ್ಯಾದಿಗಳನ್ನು ಖಚಿತಪಡಿಸಿಕೊಳ್ಳಲು ಸರ್ವೋಚ್ಛ ನ್ಯಾಯಾಲಯ ಎಲ್ಲ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಬಹುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

10 ದಿನಗಳ ಒಳಗೆ ಅಥವಾ ನಂತರದ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಮತ್ತೆ ಈ ಕುರಿತ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!