New Delhi

ಮೌನ ಮುರಿದು ದೇಶದ ಜನರ ಪ್ರಶ್ನೆಗಳಿಗೆ ಉತ್ತರಿಸಿ- ಪ್ರಧಾನಿಗೆ ರಾಹುಲ್‍ ಒತ್ತಾಯ

ನವದೆಹಲಿ, ಅ 7 – ‘ಅಟಲ್‍ ಟನಲ್’ ನಲ್ಲಿ ಕೈಬೀಸಿದ ದೃಶ್ಯಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್‍ ಗಾಂಧಿ, ದೇಶದ ಜನರು ಕೇಳುತ್ತಿರುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹತ್ರಾಸ್ ಸಾಮೂಹಿಕ ಹತ್ಯಾಚಾರ ಪ್ರಕರಣದ ಮೌನ ವಹಿಸಿದ್ದಾರೆಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‍ ಗಾಂಧಿ,’ಪ್ರಧಾನಿಯವರೇ ಸುರಂಗದಲ್ಲಿ ಮಾತ್ರ ಕೈ ಬೀಸುವುದನ್ನು ನಿಲ್ಲಿಸಿ. ನಿಮ್ಮ ಮೌನವನ್ನು ಮುರಿಯಿರಿ. ಜನರು ಕೇಳುವ ಪ್ರಶ್ನೆಗಳನ್ನು ಎದುರಿಸಿ. ದೇಶ ನಿಮಗೆ ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಿದೆ.’ ಸಾಮಾಜಿಕ ಮಾಧ್ಯಮ ಪೋಸ್ಟ್‍ ನಲ್ಲಿ ರಾಹುಲ್‍ ಗಾಂಧಿ ಹೇಳಿದ್ದಾರೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೌನವಾಗಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ರಾಹುಲ್‍ ಗಾಂಧಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.

ಪ್ರಕರಣದ ಅಸಮರ್ಪಕ ನಿರ್ವಹಣೆಗಾಗಿ ಮತ್ತು ಸಂತ್ರಸ್ತೆಯ ಕುಟುಂಬದ ಒಪ್ಪಿಗೆಯಿಲ್ಲದೆ ಸಂತ್ರಸ್ತೆಯ ಮೃತದೇಹವನ್ನು ದಹನ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!