Bengaluru

ಹಳಿಯಾಳ, ದಾಂಡೇಲಿ ತಾಲೂಕುಗಳಿಗೆ ಹೆಚ್ಚಿನ ನೆರವು ನಿರೀಕ್ಷೆ: ದೇಶಪಾಂಡೆ

ಬೆಂಗಳೂರು, ಸೆ 7- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳನ್ನು ಪ್ರವಾಹ ಸಂತ್ರಸ್ತ ಪ್ರದೇಶಗಳೆಂದು ರಾಜ್ಯ ಸರ್ಕಾರ ಘೋಷಿಸಿದ್ದು, ಇದರಿಂದ ಹೆಚ್ಚಿನ ನೆರವು ಪಡೆಯಲು ಸಹಕಾರಿಯಾಗಲಿದೆ ಎಂದು ಹಳಿಯಾಳ ಕ್ಷೇತ್ರದ ಶಾಸಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರಕಾರದ ಹಿಂದಿನ ಆದೇಶದ ಪ್ರಕಾರ ಜಿಲ್ಲೆಯ ಹಳಿಯಾಳ- ದಾಂಡೇಲಿ ತಾಲೂಕುಗಳು ಪ್ರವಾಹ ಸಂತ್ರಸ್ತ ಪಟ್ಟಿಯಿಂದ ಹೊರಗುಳಿದಿದತ್ತು. ಇಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಬೆಳೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಕೆಲವು ಸ್ಥಳಗಳಲ್ಲಿ ಪ್ರವಾಹದ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಈ ಬಗ್ಗೆ ನಿಖರ ಮಾಹಿತಿಯನ್ನು ಕಂದಾಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಂದ ತರಿಸಿಕೊಂಡು ಸರ್ಕಾರದ ಸಲ್ಲಿಸಲಾಗಿತ್ತು ಎಂದಿದ್ದಾರೆ.

ಸರ್ಕಾರ ಈ ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿದೆ. ಇದರಿಂದ ಈ ಭಾಗದ ರೈತರಿಗೆ, ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ಕಲ್ಪಿಸಲು ಅನುಕೂಲವಾಗಲಿದೆ. ಸಕಾಲಕ್ಕೆ ಸ್ಪಂದಿಸಿದ ಕಂದಾಯ ಸಚಿವ ಆರ್. ಅಶೋಕ ಮತ್ತು ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ದೇಶಪಾಂಡೆ ಧನ್ಯವಾದ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!