New Delhi

ಅನಿರ್ದಿಷ್ಟಾವಧಿಗೆ ಸಾರ್ವಜನಿಕ ಸ್ಥಳ ಬಳಕೆ ಸಲ್ಲ : ಸುಪ್ರೀಂ ಕೋರ್ಟ್

ನವದೆಹಲಿ, ಅ 7- ಯಾವುದೇ ವ್ಯಕ್ತಿ ಅಥವಾ ಸಂಘಟನೆ ಪ್ರತಿಭಟನೆ ಹೆಸರಿನಲ್ಲಿ ಶಾಹೀನ ಬಾಗ್ ನಂತಹ ಸಾರ್ವಜನಿಕ ಸ್ಥಳಗಳನ್ನ ಅನಿರ್ದಿಷ್ಟಾವಧಿಗೆ ಬಳಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಮಾಡಿದೆ.

ಶಾಹೀನ ಬಾಗ್ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ಪ್ರತಿಭಟನೆಗೆಂದು ಆಕ್ರಮಿಸಿಕೊಳ್ಳುವಂತಿಲ್ಲ. ಪ್ರತಿಭಟನೆಗಳನ್ನು ನಿಗದಿತ ಪ್ರದೇಶಗಳಲ್ಲಿ ಮಾಡಬೇಕು ಮತ್ತು ಮೊದಲೇ ಆಡಳಿತದಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.

ಶಾಹೀನ್ ಬಾಗ್ ನಲ್ಲಿ ಸಿಎಎ ತಿದ್ದುಪಡಿ ಮಸೂದೆ ವಿರೋಧಿಸಿ ಕಳೆದ ವರ್ಷ ತೀವ್ರ ಪ್ರತಿಭಟನೆ ಆರಂಭವಾಗಿತ್ತು. ನಂತರ ಕೋವಿಡ್-19 ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು. ಆದರೆ ಡಿಸೆಂಬರ್ ಗಿಂತಲೂ ಮೊದಲೇ ಇಲ್ಲಿ ಪ್ರತಿಭಟನೆ ಆರಂಭವಾಗಿ ಸಾರ್ವಜನಿಕ ಓಡಾಟದ ಸ್ಥಳ ಶಾಹೀನ ಬಾಗ್ ನ್ನು ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು.

ಇದರ ಬಗ್ಗೆ ವಕೀಲ ಅಮಿತ್ ಸಾಹ್ನಿ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು. ಈ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!