New Delhi

ಅಭಿವ್ಯಕ್ತಿ ಸ್ವಾತಂತ್ರ್ಯ ಅತಿ ಹೆಚ್ಚು ದುರ್ಬಳಕೆಯಾಗುತ್ತಿದೆ; ಸುಪ್ರೀಂ ಕೋರ್ಟ್

ನವದೆಹಲಿ, ಅ 8- ನವದೆಹಲಿಯ ನಿಜಾಮುದ್ದೀನ್‌ ಮರ್ಕಜ್‌ ಪ್ರಾರ್ಥನೆಯಲ್ಲಿ ಪಾಲ್ಗೊಂಡ ತಬ್ಲಿಘಿ ಜಮಾತ್ ಅವರ ಬಗ್ಗೆ ಟಿವಿ ಚಾನಲ್‌ಗಳು ಅವಹೇಳನಕಾರಿಯಾಗಿ ಸುದ್ದಿ ಪ್ರಸಾರ ಮಾಡಿವೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌, ಇತ್ತೀಚಿನ ಸಮಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅತಿ ಹೆಚ್ಚು ದುರ್ಬಳಕೆಯಾಗಿರುವ ಹಕ್ಕಾಗಿದೆ ಎಂದಿದೆ.

ಜಮಾಯತ್‌ ಉಲಮಾ-ಇ-ಹಿಂದ್, ಪೀಸ್‌ ಪಾರ್ಟಿ, ವಕ್ಫ್‌ ಸಂಸ್ಥೆ ಮತ್ತು ಅಬ್ದುಲ್‌ ಕುದ್ದೂಸ್‌ ಲಸ್ಕರ್ ಈ ಅರ್ಜಿ ಸಲ್ಲಿಸಿದ್ದರು. ಜಮಾತ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ತಬ್ಲಿಘಿ ಸಮುದಾಯದ ಜನರ ಬಗ್ಗೆ ಟಿವಿಗಳಲ್ಲಿ ಕೋಮು ಭಾವನೆಗಳಿಗೆ ಧಕ್ಕೆ ತರುವಂತೆ ಚಿತ್ರಿಸಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಪ್ರಕರಣ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!