Bengaluru

ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ

ಬೆಂಗಳೂರು, ಅ 8- ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳ ಹಂತದಲ್ಲೇ ಅ. 20ರೊಳಗೆ ಪೂರಕ ಪರೀಕ್ಷೆ ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

2020ರ ಫೆಬ್ರುವರಿಯಲ್ಲಿ ನಡೆದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ವಿದ್ಯಾರ್ಥಿಗಳಿಗೆ ಜು. 13ರವರೆಗೆ ಪೂರಕ ಪರೀಕ್ಷೆ ಶುಲ್ಕ ಪಾವತಿಸಲು ಅನುಮತಿ ನೀಡಲಾಗಿತ್ತು.

ಈ ಪೂರಕ ಪರೀಕ್ಷೆಯಲ್ಲಿಯೂ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ, ಆಯಾ ವಿಷಯಗಳಲ್ಲಿ ಉತ್ತೀರ್ಣಕ್ಕೆ ಅಗತ್ಯವಿರುವ ಕನಿಷ್ಠ ಅಂಕ ನೀಡಿ ಉತ್ತೀರ್ಣಗೊಳಿಸಬೇಕು ಎಂದು ಕೂಡ ಇಲಾಖೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!