Mysore

ಶಾಲೆ ಆರಂಭ ಕುರಿತು ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ: ಶ್ರೀರಾಮುಲು

ಮೈಸೂರು, ಅ.8- ಶಾಲಾ-ಕಾಲೇಜುಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೈಸೂರಿನಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ತಮಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯ. ಸರ್ಕಾರ ನೇಮಿಸಿರುವ ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಶಾಲೆ ಆರಂಭಿಸಬೇಕೋ ಅಥವಾ ಬೇಡವೋ ಅನ್ನುವ ಬಗ್ಗೆ, ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು, ಎಲ್ಲಾ ಕ್ಷೇತ್ರದ ತಜ್ಞರ ಅಭಿಪ್ರಾಯ ಪಡೆಯಲಾಗಿದೆ ಎಂದು ಸಚಿವರು ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವ ರೀತಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲಾಯಿತೋ, ಅದೇ ಶಾಲಾ-ಕಾಲೇಜು ಪ್ರಾರಂಭವಾದಾಗಲೂ ಕೂಡ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸವಿಸ್ತಾರವಾದ ವರದಿ ಪಡೆದ ನಂತರ, ತಜ್ಞರ ಸಲಹೆಗಳನ್ನು ಪಡೆದು ಆದಷ್ಟು ಒಂದು ವಾರದೊಳಗೆ ಶಿಕ್ಷಣ ಇಲಾಖೆಗೆ, ಸಚಿವರಾದ ಸುರೇಶ ಕುಮಾರ ಅವರಿಗೆ ನೀಡಲಾಗುವುದು ಎಂದರು.

ಇಡೀ ಭಾರತದಲ್ಲಿ 17 ರಾಜ್ಯಗಳನ್ನು ಗುರುತಿಸಿದ್ದಾರೆ. 17 ರಾಜ್ಯಗಳಲ್ಲಿ 60 ಜಿಲ್ಲೆಗಳಲ್ಲಿ ಅದರಲ್ಲಿ ನಮ್ಮ ಕರ್ನಾಟಕದಲ್ಲಿ ಕೂಡ ವಿಶೇಷವಾಗಿ ಬೆಂಗಳೂರು, ಮೈಸೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚು ಇವೆ. ಸಾವಿನ ಸಂಖ್ಯೆ ಕೂಡ ಮೈಸೂರಿನಲ್ಲಿ ಹೆಚ್ಚುತ್ತಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!