Bengaluru

10 ರಂದು ಶಾಸಕರು, ಸಂಸದರ ಮನೆ ಮುಂದೆ ಪ್ರತಿಭಟನೆ

ಬೆಂಗಳೂರು, ಅ.8- ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಾರತೀಯ ಕಿಸಾನ್ ಸಂಘ ಅಕ್ಟೋಬರ್ 10 ರಂದು ರಾಜ್ಯದ ಎಲ್ಲ ಶಾಸಕರು ಹಾಗೂ ಸಂಸದರ ಮನೆಯ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಸೆಕ್ಸನ್ 79ಎ, ಬಿ,ಸಿ ಮತ್ತು 80 ನ್ನು ರದ್ದುಗೊಳಿಸಲು ಸುಗ್ರೀವಾಜ್ಞೆ ತರಲು ಹೊರಟಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘ ರಾಜ್ಯದ ಎಲ್ಲ ಶಾಸಕರು ಹಾಗೂ ಸಂಸದರ ಮನೆಗೆ ಜಾಥಾ ಮೂಲಕ ತೆರಳಿ ಮನವಿ ಸಲ್ಲಿಸಲಿದೆ. ಅದರಂತೆ ರಾಜ್ಯ ಬಿಜೆಪಿ ಕಚೇರಿಗೆ ತೆರಳಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಲಿದೆ ಎಂದು ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!