Jammu and Kashmir

ಉರಿ ಸೆಕ್ಟರ್ ನಲ್ಲಿ ಪಾಕ್ ಸೇನೆಯಿಂದ ಮತ್ತೆ ಕದನವಿರಾಮ ಉಲ್ಲಂಘನೆ

ಬಾರಾಬುಲ್ಲಾ, ಅ 09- ಉತ್ತರ ಕಾಶ್ಮೀರ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನದ ಪಡೆಗಳು ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಮಾರ್ಟರ್ ಮತ್ತು ಇನ್ನಿತರ ಶಸ್ತ್ರಾಸ್ತ್ರಗಳೊಂದಿಗೆ ಫಾರ್ವರ್ಡ್ ಪೋಸ್ಟ್‌ಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ ಮುಂಜಾನೆ ಅಪ್ರಚೋದಿತ ದಾಳಿ ನಡೆಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಸೈನ್ಯವು ಮಧ್ಯರಾತ್ರಿ ಸುಮಾರು ಒಂದು ಗಂಟೆಗೆ ಮಾರ್ಟರ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಹಾರಿಸಿದಾಗ ಉರಿ ಸೆಕ್ಟರ್‌ನ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಹಳ್ಳಿ ಕಮಲ್ಕೋಟೆ ಮತ್ತು ಪಕ್ಕದ ಪ್ರದೇಶಗಳಲ್ಲಿ ಭೀತಿ ಉಂಟಾಯಿತು

ಪಾಕ್ ಶೆಲ್ ದಾಳಿಯ ಸಂದರ್ಭದಲ್ಲಿ ಹಳ್ಳಿಯ ಇಡೀ ಜನಸಂಖ್ಯೆಗೆ ಆಶ್ರಯ ಪಡೆಯಲು ಈ ಪ್ರದೇಶದಲ್ಲಿ ಕೆಲವೇ ಬಂಕರ್‌ಗಳನ್ನು ಮಾತ್ರ ನಿರ್ಮಿಸಲಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದು, ಹೆಚ್ಚಿನ ಬಂಕರ್ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

ಪಾಕ್ ದಾಳಿಗೆ ಭಾರತೀಯ ಪಡೆಗಳು ಸಹ ಪ್ರತೀಕಾರ ತೀರಿಸಿಕೊಂಡಿದ್ದು, ಸುಮಾರು ಅರ್ಧಗಂಟೆಯ ಕಾಲ ಗುಂಡಿನ ಚಕಮಕಿ ನಡೆಯಿತು ಎನ್ನಲಾಗಿದೆ.

ಉಗ್ರರನ್ನು ಭಾರತದ ಗಡಿಯೊಳಗೆ ನುಸುಳಿಸುವ ಸಲುವಾಗಿ ಪಾಕ್ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸುತ್ತಿವೆ. ಉಗ್ರರ ಯಾವುದೇ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲು ಭಾರತೀಯ ಪಡೆಗಳು ಈಗಾಗಲೇ ಹೆಚ್ಚಿನ ಎಚ್ಚರಿಕೆ ವಹಿಸಿವೆ ಎಂದು ಮೂಲಗಳು ಹೇಳಿವೆ.

Leave a Reply

Your email address will not be published. Required fields are marked *

Back to top button
error: Content is protected !!