Bengaluru

ವಿದ್ಯಾಗಮ ಯೋಜನೆ ಪರಿಪೂರ್ಣ, ಸುರಕ್ಷಿತ : ಸಚಿವ ಸುರೇಶ ಕುಮಾರ

ಬೆಂಗಳೂರು,ಅ 09- ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವ ರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂಬ ಕುರಿತಾದ ವರದಿಯೊಂದಿಗೆ ಶಾಲಾ ಮಕ್ಕಳಿಗೆ ಸುರ ಕ್ಷಿತ ಕ್ರಮಗಳೊಂದಿಗೆ ಕಲಿಕೆಯನ್ನು ಮುಂದುವರೆಸುವ ‘ವಿದ್ಯಾಗಮ’ಯೋಜನೆಯ ವೈಫಲ್ಯವೆಂಬಂತೆ ಬಿಂಬಿ ಸಿರುವುದು ವಿಷಾದನೀಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾ ಯಪಟ್ಟಿದ್ದಾರೆ.

ಶಾಲೆ ಮುಚ್ಚಿರುವ ಸಮಯದಲ್ಲಿಯೂ ಮಕ್ಕಳ ನಿರಂತರ ಕಲಿಕೆ, ಪ್ರತಿ ಮಗುವೂ ಕಲಿಕಾ ವ್ಯಾಪ್ತಿಯಲ್ಲಿ ಬರು ವಂತೆ ಯೋಜನೆ ಶಿಕ್ಷಕರು-ಮಕ್ಕಳ ನಿರಂತರ ಸಂಪರ್ಕ,ಮಕ್ಕಳಲ್ಲಿ ಮಾರ್ಗದರ್ಶಿತ ಸ್ವಯಂ ಕಲಿಕೆ,ಶಿಕ್ಷಕರ ಮೂಲಕ ಮಕ್ಕಳ ಮನೋಸ್ಥೈರ್ಯದ ವೃದ್ಧಿ,ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಖಾತ್ರಿ,ಶಿಕ್ಷಕರು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರು,ಆಡಳಿತ ಮಂಡಳಿಯವರು,ಸ್ವಯಂ ಸೇವಕರು,ಪೋಷಕರು ಹಾಗೂ ಸಮುದಾಯದ ಎಲ್ಲಾ ಭಾಗೀದಾರ ಸಕ್ರಿಯ ತೊಡಗಿಸುವಿಕೆಯಂತಹ ಸದುದ್ದೇಶಗಳೊಂದಿಗೆ ಆರಂಭ ವಾಗಿರುವ ವಿದ್ಯಾಗಮ ಕಾರ್ಯಕ್ರಮವನ್ನು ನಿರ್ವಹಿಸುವ ಎಲ್ಲ ಶಿಕ್ಷಕರು ಮಕ್ಕಳನ್ನು ಕಲಿಕಾ ಚಟುವಟಿಕೆಗಳ ಲ್ಲಿ ಯಾವ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಮಾಹಿತಿ,ತರಬೇತಿಯನ್ನು ಪಡೆದು ಅವರು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ವಿವಿಧ ತರಗತಿಗಳ ಒಟ್ಟು 49.34 ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳು ‘ವಿದ್ಯಾಗಮದ ಪ್ರಯೋಜನವನ್ನು ಪಡೆಯುತ್ತಿದ್ದು,2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.ಎಲ್ಲಿಯೂ ವಿದ್ಯಾರ್ಥಿಗಳಿಗೆ ವಿದ್ಯಾಗಮ ಚಟು ವಟಿಕೆಯಲ್ಲಿ ತೊಡಗಿಸಿಕೊಂಡ ಕಾರಣಕ್ಕಾಗಿ ಕೋವಿಡ್ ಸೋಂಕು ತಗುಲಿರುವುದು ವರದಿಯಾಗಿಲ್ಲ ಎಂದ ಅವರು ಸ್ಪಷ್ಟನೆ ನೀಡಿದ್ದಾರೆ.

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿ ಗೆ ಒಂದು ತಿಂಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದು,ಅವರು ಈಗ ಸೋಂಕಿನಿಂದ ಪೂರ್ಣ ಗುಣಮುಖ ರಾಗಿ ಆರೋಗ್ಯದಿಂದಿದ್ದಾರೆ.ಈ ಅವಧಿಯಲ್ಲಿ ಶಾಲೆಯ ಯಾವುದೇ ಶಿಕ್ಷಕರಿಗೆ ಯಾವುದೇ ರೀತಿಯ ಸೋಂಕು ತಗುಲಿರುವುದಿಲ್ಲ.ಸೆ. 22ರಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರ್ಯಾಂಡಮ್ ಆಗಿ ಸುಮಾರು 203 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಿದಾಗ 4 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢ ಪಟ್ಟಿದೆ.ಈ ವಿದ್ಯಾರ್ಥಿಗಳು ಶಾಲಾವರಣದಲ್ಲಿ ಈ ಸೋಂಕು ತಗುಲಿಸಿಕೊಂಡಿ ರುವುದು ಸಾಧ್ಯವಿಲ್ಲ ಎಂಬ ಅಂಶಗಳನ್ನು ಸ್ಥಳೀಯ ಜಿಲ್ಲಾ ಉಪನಿರ್ದೇಶಕರು ದೃಢಪಡಿಸಿದ್ದಾರೆ. ಹಾಗಾಗಿ ಶಿಕ್ಷಕರ ಮೂಲಕ ವಿದ್ಯಾರ್ಥಿ ಗಳಿಗೆ ಸೋಂಕು ತಗುಲಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಅವರು ಸಮರ್ಥಿಸಿ ಕೊಂಡಿ ದ್ದಾರೆ.

ನಿಗದಿತ ಕನಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು ಸೂಚಿತ ಶಿಕ್ಷಕರ ಮಾಗದರ್ಶನದಡಿ ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಕಲಿಕೆಯಲ್ಲಿ ಮುಂದುವರೆದಿದ್ದು,ವಿದ್ಯಾಗಮದ ಕಾರಣ ಈ ಸೋಂಕು ತಗಲಿರುತ್ತದೆನ್ನುವುದು, ಶಿಕ್ಷ ಕರು ವಿದ್ಯಾಗಮದ ಕಾರಣವೇ ಸೋಂಕು ಹೊಂದಿರುವ ರೀತಿಯಲ್ಲಿ ಬಿಂಬಿಸುವುದು ನಾವು ವಿದ್ಯಾರ್ಥಿ ಸಮೂ ಹಕ್ಕೆ ಎಸಗುವ ಅನ್ಯಾಯವಾಗುತ್ತದೆ. ಈಗಾಗಲೇ ಹೆಚ್ಚುತ್ತಿರುವ ಸಾಮಾಜಿಕ ಪಿಡುಗು ಗಳ ನಡುವೆ ವಿದ್ಯಾರ್ಥಿಗ ಳನ್ನು ಸುರಕ್ಷಿತವಾದ ವಾತಾವರಣದಲ್ಲಿ ಕಲಿಕೆಗೆ ತೊಡಗಿಸಿಕೊಳ್ಳದೇ ಹೋದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಚಾರವಾದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಯಾವುದೇ ಶಾಲೆಯಲ್ಲಿಯೂ ವಿದ್ಯಾಗಮ ದುರುಪಯೋಗವಾಗುತ್ತಿಲ್ಲ.ಕಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ತರಬೇತಿ ಹೊಂದಿದ ವೃತ್ತಿಪರರಾಗಿದ್ದಾರೆ ಹಾಗೆಯೇ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಸೂಕ್ತ ಅರ್ಹತೆ ಹೊಂದಿದವರಾಗಿದ್ದಾರೆ ಎಂದಿರುವ ಸಚಿವರು,ವಿದ್ಯಾಗಮದಂ ತಹ ಮಹತ್ವದ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಸಲ್ಲದೆಂದು ಸಚಿವರು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!