Bengaluru

ತಕ್ಷಣಕ್ಕೆ ಶಾಲಾ ಆರಂಭಿಸುವುದಿಲ್ಲ : ಮುಖ್ಯಮಂತ್ರಿ

ಬೆಂಗಳೂರು,ಅ 09- ಕೋವಿಡ್ ತೀವ್ರವಾಗಿ ವ್ಯಾಪಿಸುತ್ತಿರುವ ನಡುವೆಯೂ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ.ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿ ದ್ದಾರೆ.ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂಧು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.

ಶಾಲೆಗಳನ್ನು ಆರಂಭಿಸುವ ಬಗ್ಗೆ ಪರ ವಿರೋಧ ಚೆರ್ಚೆ ನಡೆಸುತ್ತಿದ್ದು ಈ ಬಗ್ಗೆ ಮಾಧ್ಯಮಗಳಲ್ಲಿಯೂ ಸಾಕ ಷ್ಟು ಚೆರ್ಚೆ ನಡೆಸುತ್ತಿವೆ.ರಾಜಕೀಯ ಪಕ್ಷಗಳ ಮುಖಂಡರು ಶಾಲೆ ತೆರೆಯುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದ್ದಾರೆ.ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲೆಗಳನ್ನು ಆರಂಭಿಸುವ ಮುನ್ನ ಎಲ್ಲಾ ಪಕ್ಷಗಳ ಮುಖಂಡರು, ತಜ್ಞರು,ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಬಾಧಕಗಳ ಬಗ್ಗೆ ಸಮಗ್ರ ಚೆರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.

ಅಲ್ಲಿಯವರೆಗೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಉಂಟಾಗಿರುವ ಊಹಾಪೋಹ ಮತ್ತು ವದಂತಿಗಳಿಗೆ ಕಿವಿಗೊ ಡಬಾರದು ಎಂದು ಮುಖ್ಯಮಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!