Belagavi

ಪಂಚಮಸಾಲಿಗಳಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯಿಸಿ ಸುವಣ೯ಸೌಧದೆದುರು ಉಪವಾಸ

ಬೆಂಗಳೂರು, ಅ. 10- ಲಿಂಗಾಯತ ಸಮುದಾಯದಲ್ಲಿ ಅಗ್ರಗಣ್ಯವಾಗಿರುವ ಪಂಚಮಸಾಲಿ ಸಮಾಜವನ್ನು ರಾಜ್ಯ ಸರ್ಕಾರ ಪ್ರವರ್ಗ 2ಎ ಗೆ ಸೇರಿಸುವಂತೆ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧಧ ಮುಂಭಾಗ ಇದೇ ಅಕ್ಟೋಬರ್ 28ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಜಿ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಕೇಂದ್ರ ಸರ್ಕಾರ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗ ಪಟ್ಟಿಯಲ್ಲಿ ಸೇರಿಸಬೇಕು. ಪ್ರಸಕ್ತ ಸಮಾಜವನ್ನು ಪ್ರವರ್ಗ 3 ಬಿ ನಲ್ಲಿದ್ದು ಸಮಾಜಕ್ಕೆ ಈಗ ಪ್ರತ್ಯೇಕ ಮೀಸಲಾತಿ ಅಗತ್ಯವಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗಾಗಿ ಪ್ರವರ್ಗ 2 ಎ ಮೀಸಲಾತಿ ಬೇಕಾಗಿದೆ. ಅದಕ್ಕಾಗಿ ಹೋರಾಟ ಮಾಡಲು ತಿರ್ಮಾನ ಮಾಡಲಾಗಿದೆ ಎಂದರು.

ಲಿಂಗಾಯತ ಸಮುದಾಯದಲ್ಲಿ ಪಂಚಮಸಾಲಿ ದೊಡ್ಡ ಸಮಾಜವಾಗಿದೆ. ಆದರೆ ಕರ್ನಾಟಕ ಜಾತಿ ಪಟ್ಟಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರಸ್ತಾಪ ಇಲ್ಲ. ಕೃಷಿ ಆಧಾರಿತ ಪಂಚಮಸಾಲಿ ಸಮುದಾಯಕ್ಕೆ ಸರ್ಕಾರಿ ಸೌಲಭ್ಯ ಸಿಗುತ್ತಿಲ್ಲ. ಹೀಗಾಗಿ ಮೀಸಲಾತಿಗೆ ಆಗ್ರಹಿಸಿ ಈ ಹಿಂದೆ ವೀರಪ್ಪ ಮೊಯಿಲಿ ಸರ್ಕಾರದಲ್ಲಿ ಮನವಿ ಸಲ್ಲಿಸಲಾಗಿತ್ತು. ಸರ್ಕಾರದಲ್ಲೀಗ ಪಂಚಮಸಾಲಿ ಸಮಾಜದ 16, ಶಾಸಕರು, 3 ಸಂಸದರು ಇದ್ದಾರೆ.. ನಮ್ಮ ಸಮಾಜಕ್ಕೆ ಮೀಸಲಾತಿ ನೀಡಬೇಕು ಎಂದು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಅವಧಿ‌ ಮುಗಿದ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ಪಂಚಮಶಾಲಿ ಸಮುದಾಯಕ್ಕೆ ನೀಡಬೇಕು. ಪಂಚಮಶಾಲಿ ಸಮುದಾಯದ ಶೇಕಡ 70%ರಷ್ಟು ಮಂದಿ ಬಿಜೆಪಿಯ‌ನ್ನು ಬೆಂಬಲಿಸಿಕೊಂಡು ಬರುತ್ತಿದ್ದಾರೆ. ಸಮಾಜಕ್ಕೆ ಸಚಿವ ಸ್ಥಾನ‌ ಕೇಳುವುದಕ್ಕಿಂತ ಮುಖ್ಯಮಂತ್ರಿ ಸ್ಥಾನವನ್ನೇ ಕೊಡುವುದು ಸೂಕ್ತ. ಮಹೇಶ್ ಕುಮಟಹಳ್ಳಿ ಅವರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ನೀಡದ ಕಾರಣ ತಮಗೆ ಅಸಮಾಧಾನವಾಗಿದೆ. ನಮ್ಮ ಸಮುದಾಯದ ಶಾಸಕರ ಸಂಖ್ಯೆಗೆ ಅನುಗುಣವಾಗಿ ಕನಿಷ್ಠ ಮೂವರು ಶಾಸಕರನ್ನಾದರೂ ಸಚಿವರನ್ನಾಗಿ ಮಾಡಬೇಕಿತ್ತು, ಈಗ ಸಚಿವ ಸ್ಥಾನಕ್ಕಿಂತಲೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬೇಕು ಎಂಬ ಹೋರಾಟವೇ ನಮಗೆ ಮುಖ್ಯವಾಗಿದೆ ಎಂದರು.

ಯಡಿಯೂರಪ್ಪ ಅವಧಿ ಮೂರು ವರ್ಷ ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಮುಂದೆಯೂ ಅವರೇ ಮುಖ್ಯಮಂತ್ರಿಯಾಗುತ್ತಾರೆಯೋ ಅದು ಸಹ ಗೊತ್ತಿಲ್ಲ. ಆದರೆ ಅವರ ಅವಧಿ ಮುಗಿದ ಬಳಿಕ ನಮ್ಮ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನ ಕೊಡಬೇಕು,. ಪಂಚಮಸಾಲಿ ಸಮಾಜದಲ್ಲಿ ಅನೇಕರು ಅರ್ಹತೆ ಇರುವವರು ಸಂಪುಟದಲ್ಲಿದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ ಎಂದರು.

ವಿದ್ಯಾಗಮನ ಯೋಜನೆ ಜಾರಿಗೆ ವಿರೋಧ ವ್ಯಕ್ತಪಡಿಸಿದ ಜಯಮೃತ್ಯುಂಜಯ ಸ್ವಾಮೀಜಿ,
ಶಿಕ್ಷಕರು ಮಕ್ಕಳ ಮೂಲಕ ಈ ದೇಶ ಕಟ್ಟುವವರು. ಅವರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು.ಖಾಸಗಿ ಶಾಲಾ ಶಿಕ್ಷಕರಿಗೆ ಪ್ರತ್ಯೇಕ ಪ್ಯಾಕೆಜ್ ನೀಡಬೇಕು ಎಂದು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!